ಚಿಕ್ಕಮಗಳೂರು: ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿ ಕಾಡಾನೆ ಕೆರಳಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅರಣ್ಯ ಇಲಾಖೆ ಈ ವಿಡಿಯೊದ ನೈಜತೆ ಬಗ್ಗೆ ತನಿಖೆ ನಡೆಸುತ್ತಿದೆ.

50 ಸೆಕೆಂಡುಗಳ ವಿಡಿಯೊದಲ್ಲಿ ತೆರೆದ ಜೀಪಿನಲ್ಲಿ ಚಾಲಕ ಕಾಡಾನೆಯತ್ತ ಬೆರಳು ತೋರಿಸುತ್ತಾ ವಾಹನವನ್ನು ಅದರ ಸಮೀಪಕ್ಕೆ ಕೊಂಡೊಯ್ಯುತ್ತಾರೆ. ಆನೆ ವಾಹನದತ್ತ ದಾಳಿ ಮಾಡಲು ಮುಂದಾದಾಗ ಚಾಲಕ ವೇಗವಾಗಿ ವಾಹನವನ್ನು ಹಿಂದಕ್ಕೆ ತಿರುಗಿಸಿಕೊಂಡು ಹೋಗುತ್ತಾನೆ. ಬಳಿಕ ತಿರುಗಿಸಿ ಮತ್ತೆ ಅದೇ ಅನೆಯ ಸಮೀಪಕ್ಕೆ ಬರುತ್ತಾರೆ. ಮತ್ತೊಮ್ಮೆ ಆನೆ ಜೀಪ್ ಹಿಮ್ಮೆಟ್ಟಿಸುವ ದೃಶ್ಯ ವಿಡಿಯೊದಲ್ಲಿದೆ.

ವೈರಲ್ ಆಗಿರುವ ವಿಡಿಯೊವನ್ನು ಗಮನಿಸಿದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು, ವಾಹನ ಚಾಲಕನನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಈ ಘಟನೆ ಸೋಮವಾರ ನಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯೋ ಅಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪುಲ್ಕಿತ್ ಮೀನಾ, ‘ಪ್ರಾಥಮಿಕ ತನಿಖೆಯಲ್ಲಿ ವಾಹನ ಚಾಲಕನನ್ನು ಗುರುತಿಸಲಾಗಿದೆ. ಈ ವಾಹನವು ಸಂರಕ್ಷಿತ ಪ್ರದೇಶದ ಯಾವುದೇ ಅಧಿಕೃತ ಪ್ರವೇಶ ದ್ವಾರದಿಂದ ಪ್ರವೇಶಿಸಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಕೊಪ್ಪ ವಿಭಾಗದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪರಿಶೀಲಿಸಲಾಗುತ್ತಿದೆ. ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿರುವುದು ದೃಢಪಟ್ಟರೆ ಹೆಚ್ಚಿನ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.