ನರಸಿಂಹರಾಜಪುರ: ಮಾನವ–ವನ್ಯಜೀವಿ ಸಂಘರ್ಷದಿಂದ ಮೃತಪಟ್ಟವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಆಗ್ರಹಿಸಿದರು.

ವಿಧಾನಸಭಾ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಭಾಗವಹಿಸಿದ ಶಾಸಕರು ಅರಣ್ಯ ಸಚಿವರಿಗೆ ಪರಿಹಾರ ಮೊತ್ತ ಹೆಚ್ಚಿಸುವಂತೆ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಮಾನವ-ವನ್ಯಜೀವಿ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಮತ್ತು ಮಾಸಾಶನ ನೀಡಲಾಗುತ್ತಿದೆ. ಈ ಹಿಂದೆ ಇದ್ದ ₹15 ಲಕ್ಷ ಪರಿಹಾರದ ಮೊತ್ತವನ್ನು 2025ರ ಏಪ್ರಿಲ್ನಿಂದ ₹20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಪರಿಹಾರದ ಜತೆಗೆ 5 ವರ್ಷಗಳ ಕಾಲ ಮಾಸಿಕ ₹4 ಸಾವಿರ ಮಾಸಾಶನವನ್ನು ಮೃತರ ಕುಟುಂಬದ ಸದಸ್ಯರಿಗೆ ನೀಡಲಾಗುತ್ತಿದೆ ಎಂದರು.

ಅರಣ್ಯ ಇಲಾಖೆಯಲ್ಲಿ ಕಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರು ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಹಗಲಿರುಳೆನ್ನದೆ ಕ್ಲಿಷ್ಟಕರ ಸನ್ನಿವೇಶದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯನಿರತ ಸಿಬ್ಬಂದಿ ಮೃತಪಟ್ಟಾಗ ಈ ಹಿಂದೆ ₹30 ಲಕ್ಷ ಅನುಗ್ರಹ ಧನ ನೀಡಲಾಗುತ್ತಿತ್ತು. ಈಗ ಆ ಮೊತ್ತವನ್ನು ₹50 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಆದರೆ, ಇದಕ್ಕೆ ಒಪ್ಪದ ಶಾಸಕ ರಾಜೇಗೌಡ ಅರಣ್ಯ ಸಿಬ್ಬಂದಿಗೆ ನೀಡಿದಂತೆಯೇ ಇತರೇ ವ್ಯಕ್ತಿಗಳಿಗೂ ₹50 ಲಕ್ಷ ಪರಿಹಾರವನ್ನು ನೀಡುವುದರ ಮೂಲಕ ಸಮಾನತೆ ಕಾಪಾಡಬೇಕೆಂದು ಒತ್ತಾಯಿಸಿದರು.

ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದ ಅನ್ವಯ ಅವಕಾಶ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಆನೆ ಸೇರಿದಂತೆ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.