ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗನ ಕಾಯಿಲೆಗೆ ಮಹಿಳೆ ಸಾವು

Published 26 ಮಾರ್ಚ್ 2024, 11:49 IST
Last Updated 26 ಮಾರ್ಚ್ 2024, 11:49 IST
ಅಕ್ಷರ ಗಾತ್ರ

ಕೊಪ್ಪ(ಚಿಕ್ಕಮಗಳೂರು): ತಾಲ್ಲೂಕಿನ ಬಿಂತ್ರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಜೋಗಿಸರದ ನಿವಾಸಿ ರತ್ನಮ್ಮ(68) ಅವರು ಮಂಗನ ಕಾಯಿಲೆಯಿಂದ(ಕೆ.ಎಫ್.ಡಿ) ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಎಂ.ಎಸ್.ದ್ಯಾವೇಗೌಡ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾ.13 ರಂದು ರಕ್ತ ಮಾದರಿ ಸಂಗ್ರಹಿಸಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು, 14 ರಂದು ವರದಿ ಬಂದಿದ್ದು ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಮಣಿಪಾಲ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು.

ಜಿಲ್ಲೆಯಲ್ಲಿ ಈ ವರ್ಷ ಮಂಗನ ಕಾಯಿಲೆ 85 ಜನರಿಗೆ ದೃಢಪಟ್ಟಿದ್ದು, ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT