ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಪ್ರಗತಿಗೆ ಸಂತೆ ಸಹಕಾರಿ

ಗೋಣಿಬೀಡು: ಸ್ವಸಹಾಯ ಸಂಘಗಳಿಂದ ಮಾಸಿಕ ಸಂತೆ
Last Updated 1 ಜುಲೈ 2022, 2:31 IST
ಅಕ್ಷರ ಗಾತ್ರ

ಮೂಡಿಗೆರೆ: ಮಹಿಳೆಯರು ಆರ್ಥಿಕ ಪ್ರಗತಿಯನ್ನು ಸಾಧಿಸಲು ಸ್ವಸಹಾಯ ಸಂಘಗಳ ಮಾಸಿಕ ಸಂತೆಯು ಸಹಕಾರಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷಕುಮಾರ್ ಹೇಳಿದರು.

ತಾಲ್ಲೂಕಿನ ಗೋಣಿಬೀಡು ಗ್ರಾಮದಲ್ಲಿ ಗುರುವಾರ ನಡೆದ ಸ್ವಸಹಾಯ ಸಂಘಗಳ ಮಾಸಿಕ ಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ತಾಲ್ಲೂಕಿನಾದ್ಯಂತ ಸ್ವಸಹಾಯ ಸಂಘಗಳನ್ನು ಒಗ್ಗೂಡಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಒಕ್ಕೂಟಗಳನ್ನು ರಚಿಸಲಾಗಿದೆ. ಸ್ವಸಹಾಯ ಸಂಘದ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಲು, ತಾವು ಉತ್ಪಾದಿಸುವ ವಸ್ತುಗಳಿಗೆ ಮಾರುಕಟ್ಟೆಯನ್ನು ಒದಗಿಸುವ ಸಲುವಾಗಿ ಮಾಸಿಕ ಸಂತೆಗಳನ್ನು ಏರ್ಪಡಿಸಲಾಗುತ್ತಿದೆ. ಪ್ರತಿ ಹೋಬಳಿಯಲ್ಲೂ ಮಾಸಿಕ ಸಂತೆಗಳು ನಡೆಯುತ್ತಿದ್ದು, ಸ್ವಸಹಾಯ ಸಂಘದ ಕಾರ್ಯಕರ್ತರು ತಮ್ಮ ಉತ್ಪನ್ನಗಳನ್ನು ಮಾಸಿಕ ಸಂತೆಯಲ್ಲಿ ಮಾರಾಟ ಮಾಡಿ ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದರು.

ಸಹಾಯಕ ನಿರ್ದೇಶಕ ಡಿ.ಡಿ. ಪ್ರಕಾಶ್ ಮಾತನಾಡಿ, ‘ಸಂಜೀವಿನ ಸದಸ್ಯರು ಯಾವುದೇ ಉತ್ಪನ್ನವನ್ನು ತಯಾರಿಸಿದರೂ ಅದಕ್ಕೆ ಆರ್ಥಿಕ ನೆರವು ಪಡೆಯಲು ಸಾಧ್ಯವಿದೆ. ಪ್ರತಿ ಸದಸ್ಯರಿಗೆ ₹40 ಸಾವಿರವನ್ನು ಸಾಲದ ರೂಪದಲ್ಲಿ ನೀಡಲಾಗುತ್ತದೆ. ಸ್ವಸಹಾಯ ಸಂಘದ ಕಾರ್ಯಕರ್ತರು ಗುಂಪು ಚಟುವಟಿಕೆಯ ಮೂಲಕ ಕಿರು ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಿ ಲಾಭಗಳಿಸಿಕೊಳ್ಳಬೇಕು. ಯಾವುದೇ ಉದ್ಯಮವನ್ನು ನಡೆಸುವುದಾದರೂ ಸೂಕ್ತ ತರಬೇತಿ ನೀಡಿ ಕೌಶಲ್ಯ ಕಲ್ಪಿಸಿಕೊಡಲಾಗುವುದು’ ಎಂದರು.

ಒಕ್ಕೂಟದ ಅಧ್ಯಕ್ಷೆ ಗೀತಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಸುಪ್ರಿತನಯನ, ಸುಮಿತ್ರ, ಜುಬೇಧ, ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT