ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತ್ರೀ ಗೌರವಿಸುವುದು ಭಾರತೀಯ ಸಂಸ್ಕೃತಿ: ಟಿ.ಆರ್. ಸೋಮಶೇಖರಯ್ಯ

ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ
Published 18 ಮಾರ್ಚ್ 2024, 13:25 IST
Last Updated 18 ಮಾರ್ಚ್ 2024, 13:25 IST
ಅಕ್ಷರ ಗಾತ್ರ

ತರೀಕೆರೆ: ‘ಮಹಿಳೆಯರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮನಾಗಿ ಸಾಧನೆ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳನ್ನು ಗೌರವಿಸುವುದು ಭಾರತೀಯ ಸಂಸ್ಕೃತಿ ಹಾಗೂ ನಮ್ಮ ಕರ್ತವ್ಯ’ ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆಯ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಹೇಳಿದರು.

ಪಟ್ಟಣದ ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆಯ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ, ಪೋಷಕರ ಕ್ರೀಡಾಕೂಟ, ಮೊದಲನೇ ವರ್ಷದ ಅಮ್ಮ ಪ್ಲೇ ಸ್ಕೂಲ್ ವಾರ್ಷಿಕೋತ್ಸವ ಮತ್ತು ನಟ ದಿವಂಗತ ಪುನೀತ್ ರಾಜಕುಮಾರ್ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣು ಸಂಸಾರದ ಕಣ್ಣು. ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಆ ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾದವರು. ಪುರಸಭೆ 23 ವಾರ್ಡ್‍ಗಳಲ್ಲಿ ಶೇ 43.5 ಚುನಾಯಿತ ಸದಸ್ಯೆಯರು ಇದ್ದಾರೆ ಎಂದರು.

ಪುರಸಭೆ ಉಪಾಧ್ಯಕ್ಷೆ ಡಿ.ಎಸ್. ದಿವ್ಯರವಿ ಮಾತನಾಡಿ ಸಾಹಿತ್ಯ, ಶಿಕ್ಷಣ, ವಿಜ್ಞಾನ, ರಾಜಕೀಯ, ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ, ಆಟೊ ಚಾಲನೆಯಿಂದ ಪೈಲೆಟ್‌ವರೆಗೆ ಮಹಿಳೆಯರು ಸಾಧನೆ ಮಾಡಿದ್ದಾರೆ ಎಂದರು.

ಪುರಸಭೆ ಸದಸ್ಯೆ ಗಿರಿಜಾ ವರ್ಮಪ್ರಕಾಶ್ ಮಾತನಾಡಿ, ‘ಮಹಿಳೆಯರ ಸಬಲೀಕರಣದಿಂದ ಮಾತ್ರ ಸಮಾಜ ಸದೃಢವಾಗಲು ಸಾಧ್ಯ. ರಾಯಚೂರು ಜಿಲ್ಲೆಯ ಸಣ್ಣ ಗ್ರಾಮದಲ್ಲಿ ಜನಿಸಿದ ಅನು ಎನ್ನುವ ಮಹಿಳೆ ತಮ್ಮ ಸ್ವಂತ ಖರ್ಚುನಿಂದ 22 ಜಿಲ್ಲೆಗಳ 113 ಶಾಲೆಗಳಿಗೆ ಬಣ್ಣ ಹಚ್ಚಿ ಶಾಲೆಯ ಸ್ವಚ್ಛತೆ ಮಾಡಿ, ಗೋಡಿಗಳ ಮೇಲೆ ವಿದ್ಯಾರ್ಥಿಗಳ ಪಠ್ಯಪುಸ್ತಕಕ್ಕೆ ಸಂಬಂಧಿಸಿದ ಚಿತ್ರಗಳನ್ನು ಬಿಡಿಸಿರುವುದು ಶ್ಲಾಘನೀಯ’ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಟಿ.ಕೆ. ರಮೇಶ್ ಮಾತನಾಡಿ, ‘ತಂದೆ-ತಾಯಂದಿರು ಮಕ್ಕಳ ಭವಿಷ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಮಕ್ಕಳನ್ನು ದೇಶದ ಸತ್ಪ್ರಜೆಗಳನ್ನಾಗಿ ಮಾಡುವುದು ಶಿಕ್ಷಕರು ಹಾಗೂ ಪಾಲಕರ ಮೇಲಿದೆ ಎಂದರು.

ಪೋಷಕರ ಪರವಾಗಿ ಹೇಮಾವತಿ, ಶ್ವೇತಾ, ದಿವ್ಯಾ ಮಾತನಾಡಿದರು. ಪುರಸಭೆ ಸದಸ್ಯೆ ರಿಹಾನ್ ಫರ್ವೀನ್, ಯೂಸುಫ್ ಮತ್ತು ಸಂಸ್ಥೆಯ ಕಾರ್ಯದರ್ಶಿ ಲೀಲಾ ಸೋಮಶೇಖರಯ್ಯ, ನಾಗರಾಜ್, ಸುಮಾ, ಆಡಳಿತಾಧಿಕಾರಿ ಅನೂಪ್, ಮುಖ್ಯ ಶಿಕ್ಷಕಿ ವಿದ್ಯಾ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT