ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದುರ್ಗಮ ಹಾದಿಯಲ್ಲೂ ವಿದ್ಯುತ್ ಪೂರೈಕೆ’

ಯರದಂಕಲು ಗ್ರಾಮದಲ್ಲಿ ನಡೆದ ವಿದ್ಯುತ್ ಅದಾಲತ್‌
Last Updated 21 ಅಕ್ಟೋಬರ್ 2022, 6:39 IST
ಅಕ್ಷರ ಗಾತ್ರ

ತರೀಕೆರೆ: ತಾಲ್ಲೂಕಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನೀಡಲಾಗುವುದು ಎಂದು ಮೆಸ್ಕಾಂ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕುಮುದ ಹೇಳಿದರು.

ತಾಲ್ಲೂಕಿನ ಲಿಂಗದಹಳ್ಳಿ ಹೋಬಳಿಯ ಯರದಂಕಲು ಗ್ರಾಮದಲ್ಲಿ ನಡೆದ ವಿದ್ಯುತ್ ಅದಾಲತ್‌ನಲ್ಲಿ ಅವರು ಮಾತನಾಡಿದರು.

‘ಲಿಂಗದಹಳ್ಳಿ ಹೋಬಳಿ ಕೆಂಮ್ಮಣ್ಣುಗುಂಡಿ, ಕಲ್ಲತ್ತಿಗಿರಿ ಸೇರಿದಂತೆ ಕಾಮನದುರ್ಗ ಉಡೇವಾ, ಲಿಂಗದಹಳ್ಳಿ, ನಂದಿಬಟ್ಟಲು ತಿಗಡ ಸುಣ್ಣದಹಳ್ಳಿ, ಗುಳ್ಳದ ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದು ಸವಾಲಿನ ಕೆಲಸ. ಆದರೂ ನಮ್ಮ ಅಧಿಕಾರಿಗಳು ಮತ್ತು ನೌಕರರು ಯಾವುದೇ ಕೊರತೆಯಾಗದಂತೆ ವಿದ್ಯುತ್ ಸರಬರಾಜು ಮಾಡಲು ಅವಿರತ ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.

ಲಿಂಗದಹಳ್ಳಿ ಹೋಬಳಿಯಲ್ಲಿ ಹೆಚ್ಚಾಗಿ ತೆಂಗು ಅಡಿಕೆ ಕಾಫಿ, ಬೆಳೆಗಾರರು ಇದ್ದು ಸಾವಿರಾರು ಕೊಳವೆ ಬಾವಿಗಳಿವೆ. ಎಲ್ಲ ರೈತರಿಗೂ ಸಮರ್ಪಕ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದರು.

ಅದಾಲತ್‍ನಲ್ಲಿ ಚಿಕ್ಕಮಗಳೂರು ಜಿಲ್ಲಾ ವಿಭಾಗದ ಉಪ ಲೆಕ್ಕ ನಿಯಂತ್ರಣಾಧಿಕಾರಿ ಪ್ರದೀಪ್‍ಕುಮಾರ್, ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ಕುಮುದಾ, ಮೆಸ್ಕಾಂನ ಅಧಿಕಾರಿ ಅಜಯ್ ಸಹಾಯಕ ಎಂಜಿನಿಯರ್ ತಿಪ್ಪೇಶಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT