ಚಿಕ್ಕಮಗಳೂರು: ಸಂತೋಷ್ ಪಾಟೀಲ್ ಆತ್ಯಹತ್ಯೆ ಪ್ರಕರಣದ ಆರೋಪಿ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ ವತಿಯಿಂದ ಸಭೆ ಏರ್ಪಡಿಸಲಾಗಿತ್ತು.

ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಸಿದ್ದರಾಮಯ್ಯ ಅವರು,‘ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಯಹತ್ಯೆ ಪ್ರಕರಣದಲ್ಲಿಈಶ್ವರಪ್ಪ ಅವರನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ’ ಎಂದುಹೇಳಿದರು.

ಇದನ್ನೂ ಓದಿ:ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ

ಭಾಷಣ ಮುಂದುವರಿದಿತ್ತು. ಈ ವೇಳೆ ವೇದಿಕೆ ಬಳಿಗೆ ಬಂದ ಯುವತಿಯೊಬ್ಬರು, ‘ನಾನು ನಿಮ್ಮ ಅಭಿಮಾನಿ, ನಿಮ್ಮ ಜತೆ ಸೆಲ್ಫಿ ತೆಗೆಸಿಕೊಳ್ಳಬೇಕು’ ಎಂದು ಸಿದ್ದರಾಮಯ್ಯ ಅವರಲ್ಲಿಬೇಡಿಕೆ ಇಟ್ಟರು. ಅಷ್ಟಲ್ಲದೆ, ಭಾಷಣ ಮುಗಿಯವವರೆಗೂ ಅಲ್ಲಿಯೇ ಕಾದು ನಿಂತಿದ್ದರು.

ಪೊಲೀಸರು ಯವತಿಯ ಬ್ಯಾಗು ಎಲ್ಲವನ್ನು ಪರಿಶೀಲಿಸಿದರು. ಆದಾಗ್ಯೂ, ಫೋಟೊ ತೆಗೆಸಿಕೊಳ್ಳಲು ಅವಕಾಶ ಸಿಗಲಿಲ್ಲ. ಆಗ ಯುವತಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂಓದಿ:ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ: ತಲೆದಂಡದಲ್ಲೂ ಶಕ್ತಿ ಪ್ರದರ್ಶನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.