ಚಿಕ್ಕಮಗಳೂರು: ಯುವಜನ ಹೆತ್ತವರು, ಶಿಕ್ಷಕರು ಮತ್ತು ಉಪನ್ಯಾಸಕರ ಬದುಕನ್ನು ಮಾದರಿಯಾಗಿ ಮಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹನುಮಂತಪ್ಪ ಸಲಹೆ ನೀಡಿದರು.

ನಗರದ ಮಲೆನಾಡು ವಿದ್ಯಾಸಂಸ್ಥೆಯ ಎಂ.ಎಸ್. ಪದ್ಮಾವತಮ್ಮ, ಎಂ.ಕೆ. ಸಾಂಬಶಿವ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಇತ್ತೀಚಿನ ವರ್ಷಗಳಲ್ಲಿ ಯುವಜನರು ಸಿನಿಮಾ ನಟರನ್ನು ಬದುಕಿನ ಮಾದರಿಯನ್ನಾಗಿ ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ. ಸಿನಿಮಾ ನಟರು ಹೀರೋಗಳಲ್ಲ, ನಟರು ಮಾತ್ರ. ನಿಮ್ಮನ್ನು ತಿದ್ದಿ, ಭವಿಷ್ಯ ರೂಪಿಸುವವರು ಹೆತ್ತವರು, ಶಿಕ್ಷಕರು ಮತ್ತು ಉಪನ್ಯಾಸಕರು. ಅವರೇ ನಿಮ್ಮ ನಿಜವಾದ ಹೀರೋಗಳು’ ಎಂದು ಹೇಳಿದರು

ಕೆಲವು ಸಿನಿಮಾ ನಟರು ನಿಜ ಜೀವನದಲ್ಲಿ ಖಳನಾಯಕರಂತೆ ಬದುಕುತ್ತಿದ್ದಾರೆ. ಅಪರಾಧಗಳಲ್ಲಿ ಭಾಗಿಯಾಗಿ ಜೈಲು ಸೇರುತ್ತಿರುವುದು ಸಾಮಾನ್ಯವಾಗಿದೆ. ಇದನ್ನು ಅರ್ಥಮಾಡಿಕೊಳ್ಳಬೇಕು.ಯುವಜನರು ತಮಗೆ ತಾವೇ ಹೀರೋಗಳಾಗಬೇಕು. ಸಮಾಜಕ್ಕೆ ಮಾದರಿಯಾಗಿ ಬಾಳಬೇಕು’ ಎಂದು ಸಲಹೆ ನೀಡಿದರು.

ವಿದ್ಯಾರ್ಥಿ ದಿಸೆಯಲ್ಲಿ ಪ್ರೀತಿ, ಪ್ರೇಮ ಸೇರಿ ಯಾವುದೇ ಆಕರ್ಷಣೆಗಳಿಗೆ ಒಳಗಾಗಿ ಅಡ್ಡದಾರಿ ಹಿಡಿಯಬಾರದು. ವಿದ್ಯಾರ್ಥಿ ಜೀವನದಲ್ಲಿ ಎಡವಿದರೆ ನಿಮ್ಮ ಬದುಕು ಪ್ರಪಾತದತ್ತ ಸಾಗುತ್ತದೆ. ಭವಿಷ್ಯ ಹಾಳಾಗುತ್ತದೆ ಎಂದು ಎಚ್ಚರಿಸಿದರು.

ಸಂವಿಧಾನದ ಆಶಯಗಳನ್ನು ಈಡೇರಿಸುವ ಮಹತ್ತರ ಜವಾಬ್ದಾರಿ ಯುವಜನರ ಮೇಲಿದೆ. ವಿದ್ಯಾರ್ಥಿಗಳು ಈ ಬಗ್ಗೆ ಚಿಂತನೆ ನಡೆಸಬೇಕು ಎಂದು ತಿಳಿಸಿದರು.

ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಜೆ.ಪಿ. ಕೃಷ್ಣೇಗೌಡ ಮಾತನಾಡಿ, ‘ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಶಿಸ್ತು, ಸೇವಾ ಮನೋಭಾವ ಮೈಗೂಡಿಸಿಕೊಳ್ಳಬೇಕು’ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲೆ ಹಸೀನಾ ಬಾನು, ‘ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಕಾಲೇಜಿನಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ರಚಿಸಲಾಗಿದೆ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷೆ ರಾಧಾ ಸುಂದರೇಶ್, ‘ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳು ವಿದ್ಯಾರ್ಥಿ ಸಮುದಾಯವನ್ನು ಮುನ್ನಡೆಸುವ ಕೆಲಸ ಮಾಡಬೇಕು. ಕಾಲೇಜಿನ ಕೀರ್ತಿ ಹೆಚ್ಚಿಸಬೇಕು’ ಎಂದು ಹೇಳಿದರು.

ವಿವಿಧ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕ್ರೀಡೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು. ಮಲೆನಾಡು ವಿದ್ಯಾಸಂಸ್ಥೆಯ ಪದ ನಿಮಿತ್ತ ಸದಸ್ಯ ಎಂ.ಎಂ.ಗೌತಮ್, ಶೈಕ್ಷಣಿಕ ಸಲಹೆಗಾರ ಕೆ.ಎನ್.ಮಂಜುನಾಥ ಭಟ್, ಕಚೇರಿ ವ್ಯವಸ್ಥಾಪಕಿ ಶ್ರೀಲಕ್ಷ್ಮಿ , ಉಪನ್ಯಾಸಕ ಬಿ.ಆರ್.ವೀರಣ್ಣಗೌಡ , ರಾಮಿಯಾ ಬರೀನ್, ವಿದ್ಯಾರ್ಥಿಗಳಾದ ಸಿ. ಎಂ. ಪ್ರಜಿತ್ ವಿಭಾ, ಲಾವಣ್ಯ, ಚೇತನ್ ,ಶ್ರೀನಿಧಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.