ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ವಲಯ ಮಟ್ಟದ ಕ್ರೀಡಾಕೂಟ: ಬಣಕಲ್ ಪ್ರೌಢಶಾಲೆಗೆ ಎರಡನೇ ಸಮಗ್ರ ಪ್ರಶಸ್ತಿ

Last Updated 15 ಸೆಪ್ಟೆಂಬರ್ 2022, 5:04 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಕಳಸ ಸಮೀಪದ ಸಂಸೆಯಲ್ಲಿ ಇತ್ತೀಚೆಗೆ ನಡೆದ ಬಿ.ವಲಯ ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ 70 ಪಾಯಿಂಟ್ ಪಡೆದು ಎರಡನೇ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಬಾಲಕಿಯರ ವಿಭಾಗದಲ್ಲಿ ದೀಪ್ತಿ 100ಮೀ, 200ಮೀ ಓಟ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ವೈಯಕ್ತಿಕ ಚಾಂಪಿಯನ್ ಗಿರಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಸಂಭ್ರಮ 400ಮೀ ಓಟ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಬಾಲಕರ ವಿಭಾಗದಲ್ಲಿ ಮನು ಕುಮಾರ್ 400ಮೀ, 800ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದರು. ಚಿರಂತ್ 1500ಮೀ ಓಟ ದ್ವಿತೀಯ ಸ್ಥಾನ ಪಡೆದರೆ, ಅರ್ಜಾನ್ 1500 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದರು. ಅಯಾನ್ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದರೆ, 100ಮೀ ಓಟ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಯಶವಂತ್ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ನವಾಜ್ ಹ್ಯಾಮರ್ ಥ್ರೋ, ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. 4*100ಮೀ ರಿಲೇಯಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಶಾಲೆಯ ತರಬೇತುದಾರ ಪ್ರವೀಣ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಪಿ. ವಾಸುದೇವ್, ಶಿಕ್ಷಕರಾದ ಎ.ಎನ್.ಪ್ರತೀಕ್, ಜಿ.ಎಚ್. ಶ್ರೀನಿವಾಸ್, ವಲ್ಸಮ್ಮ ಪೌಲ್ಸನ್, ಚೈತ್ರಾ ರೋಹಿತ್, ಕವಿತ, ಉಮಾ ಮಹೇಶ್, ಬರಕ್ಕಿಂತ, ಅಪೂರ್ವ, ಅಕ್ರಂ ಪಾಷಾ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT