ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ: ಆರೋಪ

Last Updated 4 ಅಕ್ಟೋಬರ್ 2011, 9:40 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಅಲ್ಪಸಂಖ್ಯಾತರು ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ಮತ್ತು ದಬ್ಬಾಳಿಕೆ ಯಿಂದ ಮುಕ್ತರಾಗಿ ನ್ಯಾಯಯುತ ಹಕ್ಕುಗಳನ್ನು ಪಡೆದುಕೊಳ್ಳಲು ಕರ್ನಾ ಟಕ ದಲಿತ ಸಂಘರ್ಷ ಸಮಿತಿ ಸದಸ್ಯರಾಗಬೇಕು ಎಂದು ಸಮಿತಿ ಜಿಲ್ಲಾ ಸಂಚಾಲಕ ಎನ್.ವೆಂಕಟೇಶ್ ಕರೆ ನೀಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕ ನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸದಸ್ಯತ್ವ ನೋಂದಣಿ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಟ್ಟಿದಾಗಿನಿಂದಲೂ ಮುಸ್ಲಿಮರು ಮತ್ತು ಕ್ರೈಸ್ತರ ಪರವಾಗಿ ಹೋರಾಟ ನಡೆಸುತ್ತಿದೆ. ಈ ಸಮುದಾ ಯಗಳ ಮೇಲೆ ದೌರ್ಜನ್ಯಗಳು ನಡೆದ ಎಲ್ಲ ಸಂದರ್ಭಗಳಲ್ಲೂ ಅವರ ಪರ ನಿಂತಿದೆ. ಮನುವಾದಿ ವ್ಯವಸ್ಥೆ ಯಲ್ಲಿರುವ ಶೂದ್ರರ ಪಟ್ಟಿಯಲ್ಲಿ ದಲಿತರೊಂದಿಗೆ ಕ್ರೈಸ್ತರು ಮತ್ತು ಮುಸ್ಲಿಮರು ಸಹ ಸೇರುತ್ತಾರೆ. ಈ ಹಿನ್ನೆಲೆಯಲ್ಲಿ ಈ ಎರಡೂ ಸಮುದಾಯಗಳು ಸಂಘಟಿತ ರಾಗಿ ದಲಿತ ಸಂಘರ್ಷ ಸಮಿತಿ ಜತೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪನೆಯಾದಾಗ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ನೇತೃತ್ವದಲ್ಲಿ ಸದಸ್ಯತ್ವ ನೋಂದಣಿ ನಡೆದಿತ್ತು. ಇದೀಗ ರಾಜ್ಯ ಸಮಿತಿ ಮತ್ತೆ ನೋಂದಣಿ ಮುಂದು ವರೆಸಲು ಮುಂದಾಗಿದೆ. ಹಿಂದುಳಿದ ಮತ್ತು ಅಲ್ಪಸಂಖ್ಯಾತ ಘಟಕಗಳಿಗೆ ಎಲ್ಲಾ ಜಿಲ್ಲೆಗಳಲ್ಲೂ ಮರುಜೀವ ನೀಡಲಾಗಿದೆ ಎಂದು ತಿಳಿಸಿದರು.

ತಾಲ್ಲೂಕಿನಾದ್ಯಂತ  ಕನಿಷ್ಠ 25 ಸಾವಿರ ಜನರನ್ನು ಸಮಿತಿ ಸದಸ್ಯರನ್ನಾಗಿ ನೋಂದಣಿ ಮಾಡಿಕೊಳ್ಳ ಲಾಗುವುದು ಎಂದು ತಾಲ್ಲೂಕು ಸಂಚಾಲಕ ದೊಡ್ಡಯ್ಯ ಹೇಳಿದರು.ಸಮಿತಿ ತಾಲ್ಲೂಕು ಸಂಘಟನಾ ಸಂಚಾಲಕ ಚಂದ್ರಪ್ಪ, ಜಿಲ್ಲಾ ಸಮಿತಿ ಸದಸ್ಯ ಕೋದಂಡರಾಮ, ಜಿಲ್ಲಾ ದಲಿತ ನೌಕರರ ಒಕ್ಕೂಟದ ಅಧ್ಯಕ್ಷ ಭೀಮಯ್ಯ, ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಅಣ್ಣಯ್ಯ, ಸದಸ್ಯರಾದ ನಂಜುಂಡಪ್ಪ, ವಿ.ಧರ್ಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT