ಚಿಕ್ಕಮಗಳೂರು: ನಗರದಲ್ಲಿ ಈಚೆಗೆ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವ ಆರ್. ಅಶೋಕ್ ಅವರನ್ನು ಒತ್ತಾಯಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವರಸಿದ್ದಿ ವೇಣುಗೋಪಾಲ್ ತಿಳಿಸಿದ್ದಾರೆ.ಬಿಜೆಪಿ ಸರ್ಕಾರ ಸಾವಿರ ದಿನ ಪೂರೈಸಿದ್ದಕ್ಕೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಮುಖಂಡರು ಗೃಹಸಚಿವರನ್ನ ಭೇಟಿ ಮಾಡಿ ಘಟನೆ ಕುರಿತು ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಆದರೆ ಕೇವಲ 40ಮಂದಿ ಪೊಲೀಸರನ್ನು ನೇಮಿಸಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳು ಮೆರವಣಿಗೆಯಲ್ಲಿ ಇರಲಿಲ್ಲ. ಹಾಗಾಗಿ ಘರ್ಷಣೆ ನಡೆಯಲು ಕಾರಣವೆಂಬ ಮಾಹಿತಿಯನ್ನು ನೀಡಲಾಗಿದೆ. ಮೆರವಣಿಗೆ ಅನುಮತಿ ನೀಡಿದ ಸಂಘಟನೆಗಳನ್ನು ಹೊರತು ಪಡಿಸಿ ಬೇರೆ ಸಂಘಟನೆಗಳು ಭಾಗವಹಿಸಿದ್ದವು. ಕಲ್ಲುತೂರಾಟ ಮತ್ತು ಹಲ್ಲೆಗಳು ನಡೆದಾಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪಕ್ಷದ ಮುಖಂಡರು ಮಾಹಿತಿ ನೀಡಿದ ಬಳಿಕ ಮೆರವಣಿಗೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿದರೆಂದು ಗೃಹಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಘರ್ಷಣೆಗೆ ಇಳಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಮೆರವಣಿಗೆ ನೇತೃತ್ವದ ವಹಿಸಿದ್ದವರ ಮೇಲೆ ಕ್ರಮ ಕೈಗೊಳ್ಳ ಬೇಕು. ಶಾಂತಿಯುತವಾಗಿ ಮೆರವಣಿಗೆ ನಡೆಸು ವಲ್ಲಿ ವಿಫಲವಾಗಿರುವ ಪೊಲೀಸ್ ಅಧಿಕಾರಿಗಳ ಮೇಲೆ ಸೂಕ್ತಕ್ರಮ ಜರುಗಿಸಬೇಕೆಂದು ಒತ್ತಾ ಯಿಸಲಾಗಿದೆ ಎಂದರು.ಮನವಿ ಸ್ವೀಕರಿಸಿದ ಗೃಹಸಚಿವರು ಚಿಕ್ಕಮ ಗಳೂರು ನಗರದಲ್ಲಿ ನಡೆದಿರುವ ಘಟನೆ ಮಾಹಿತಿ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರಿಂದ ಈ ಕುರಿತು ಗಮನಹರಿ ಲಾಗಿಲ್ಲ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಕೆ.ಪ್ರಾಣೇಶ್, ನಗರ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಇತರೆ ಮುಖಂಡರು ಗೃಹ ಸಚಿವರ ಆರ್. ಅಶೋಕ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದಿದ್ದಾರೆ.

ಆರೋಪಿ ಬಂಧನಕ್ಕೆ ಆಗ್ರಹ
ಶೃಂಗೇರಿ :ಚಿಕ್ಕಮಗಳೂರಿನಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪರ್ತಕರ್ತರು ಹಾಗೂ ಪೋಲಿಸರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮತೆಗೆದು ಕೊಳ್ಳಬೇಕೆಂದು ತಾಲ್ಲೂಕು ಕಾರ್ಯ ನಿರತರ ಪರ್ತಕರ್ತರ ಸಂಘ ಒತ್ತಾಯಿಸಿದೆ.ಪಟ್ಟಣದಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದು, ಪರ್ತಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು. ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು. ಸಂಘದ ಅಧ್ಯಕ್ಷ ಅಬೂಬಕರ್ ಅಧ್ಯಕ್ಷತೆ ವಹಿಸಿದ್ದು, ಅಂಗುರ್ಡಿ ದಿನೇಶ್, ಸೂರ್ಗೋಡು ಕೃಷ್ಣಮೂರ್ತಿ, ರಾಘವೇಂದ್ರ, ವಿ. ಮಣಿ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.