ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರಿನಲ್ಲಿ ಬೇಸಿಗೆ ಶಿಬಿರ: ವಿನೋತ್ ಪ್ರಿಯಾ

ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಮೇ 25, 26 ಎರಡು ದಿನ ಶಿಬಿರ
Last Updated 13 ಮೇ 2019, 13:48 IST
ಅಕ್ಷರ ಗಾತ್ರ

ಚಿತ್ರದುರ್ಗ: ಹಿರಿಯೂರಿನ ವಾಣಿವಿಲಾಸ ಸಾಗರದಲ್ಲಿ ಸಾಹಸಮಯ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.

ಬೇಸಿಗೆ ಶಿಬಿರ ಆಯೋಜಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮೇ 25, 26ರಂದು ಎರಡು ದಿನಗಳ ಕಾಲ ಶಿಬಿರ ನಡೆಸಲಾಗುವುದು’ ಎಂದರು.

‘ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಒಟ್ಟು 100 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಹೇಳಿದರು.

‘ಇಂಥಹ ಶಿಬಿರಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಸ ಪ್ರವೃತ್ತಿ, ಆತ್ಮಸ್ಥೈರ್ಯ ವೃದ್ಧಿಸುವುದರ ಜತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಶಿಬಿರ ಆಯೋಜಿಸಿದ್ದೇವೆ. ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ವಹಿಸಬೇಕು’ ಎಂದು ಹೇಳಿದರು.

‘ಪ್ರತಿ ತಾಲ್ಲೂಕಿನಿಂದ ಕನಿಷ್ಟ 17 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಬೇಕು. ವಿದ್ಯಾರ್ಥಿಗಳ ಆಯ್ಕೆಗೂ ಮುನ್ನ ಸಂಬಂಧಪಟ್ಟ ವಿದ್ಯಾರ್ಥಿಯ ಪೋಷಕರಿಂದ ಸಮ್ಮತಿ ಪತ್ರ ಪಡೆಯಬೇಕು. ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವುದರ ಜೊತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ಡಿಡಿಪಿಐ ಆಂಥೋನಿ, ಶಿಕ್ಷಣಾಧಿಕಾರಿ ನರಸಿಂಹಪ್ಪ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT