ಶನಿವಾರ, ಜುಲೈ 24, 2021
28 °C
ಧೈರ್ಯ ತುಂಬಿದ ಸಂಸದ ಎ. ನಾರಾಯಣಸ್ವಾಮಿ

ಚಿತ್ರದುರ್ಗ: ಪ್ರಾಣಾಪಾಯದಿಂದ ಪಾರಾದ ಕಾರ್ಮಿಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ನಿರ್ಮಾಣ ಸಂಬಂಧ ಅಜ್ಜಂಪುರ ಸಮೀಪ ಹೆಬ್ಬೂರು ಗ್ರಾಮದ ಬಳಿ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ 100 ಅಡಿ ಎತ್ತರದಿಂದ ‘ಮಣ್ಣು ಕುಸಿದು’ ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ನಂತರ ಕೆಲಸ ಮಾಡಲು ಭಯಭೀತರಾಗಿ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿದ್ದರು. ಅದಕ್ಕಾಗಿ ಕಾಮಗಾರಿ ಸ್ಥಳಕ್ಕೆ ಸಂಸದ ಎ.ನಾರಾಯಣಸ್ವಾಮಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾರ್ಮಿಕರಿಗೆ ಧೈರ್ಯ ತುಂಬಿದರು.

‘ಹೆಬ್ಬೂರು ಗ್ರಾಮದ ಬಳಿ ರೈಲ್ವೆ ಹಳಿ ಕೆಳಭಾಗ ಹಾದುಹೋಗುವ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ರೈಲ್ವೆ ಇಲಾಖೆ ರೈಲು ಹಳಿ ಕೆಳಗೆ ಬಾಕ್ಸ್ ಅಳವಡಿಕೆ ಕಾಮಗಾರಿ ನಡೆಸುತ್ತಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು