ಮಂಗಳವಾರ, ಅಕ್ಟೋಬರ್ 15, 2019
27 °C

ಬರಪೀಡಿತ ಜಿಲ್ಲೆಯಲ್ಲಿ ಮುಂದುವರಿದ ಮಳೆ

Published:
Updated:
Prajavani

ಚಿತ್ರದುರ್ಗ: ಬರಪೀಡಿತ ಜಿಲ್ಲೆಯ ವಿವಿಧೆಡೆ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಕೆಲ ಕೆರೆಗಳು, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ.

ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ವೇದಾವತಿ ನದಿಯ ಒಳ ಹರಿವು ಹೆಚ್ಚಳವಾಗಿದ್ದು, ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೂ ನೀರು ಹರಿದು ಬಂದಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ದಶಕದ ನಂತರ ದೊಡ್ಡಹಳ್ಳ ತುಂಬಿ ಹರಿಯುತ್ತಿದೆ. ಚಿತ್ರದುರ್ಗ ನಗರ ಹಾಗೂ ತಾಲ್ಲೂಕಿನ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಮಳೆಯ ರಭಸಕ್ಕೆ ಚಿಕ್ಕಜಾಜೂರು ಸಮೀಪದ ಶೃಂಗೇರಿ ಹನುಮನಹಳ್ಳಿ ಕೆರೆಗೆ ನೀರು ಹರಿದು ಬಂದಿದೆ. ಗುಂಜಿಗನೂರು ಹಳ್ಳದಿಂದ ನೀರು ಹೊರಗೆ ಹರಿಯುತ್ತಿದೆ. 

Post Comments (+)