ಶನಿವಾರ, ಜೂನ್ 19, 2021
24 °C
33 ಜನರಿಗೆ ಕೋವಿಡ್ ದೃಢ | ಸೋಂಕಿತರ ಸಂಖ್ಯೆ 1,463 ಕ್ಕೆ ಏರಿಕೆ

ಚಿತ್ರದುರ್ಗ | ಒಂದೇ ದಿನ 107 ಮಂದಿ ಡಿಸ್ಚಾರ್ಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಕೊರೊನಾ ಸೋಂಕು ತಗುಲಿ ಜಿಲ್ಲೆಯ ಹಲವೆಡೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 107 ಜನ ಗುಣಮುಖರಾಗಿ ಶನಿವಾರ ಬಿಡುಗಡೆ ಹೊಂದಿದ್ದಾರೆ. 

ನೂರಕ್ಕೂ ಅಧಿಕ ಜನ ಸೋಂಕಿನಿಂದ ಮುಕ್ತರಾಗಿ ಒಂದೇ ದಿನ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಇದೇ ಪ್ರಥಮ. 33 ಜನರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಇದರಿಂದಾಗಿ ಕೋವಿಡ್-19 ರೋಗಿಗಳ ಸಂಖ್ಯೆ 1,463 ಕ್ಕೆ ಏರಿಕೆಯಾಗಿದೆ. 

ಒಟ್ಟು 811 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ಚಿತ್ರದುರ್ಗ 10, ಹಿರಿಯೂರು 9, ಹೊಸದುರ್ಗ, ಚಳ್ಳಕೆರೆ ತಲಾ 2, ಮೊಳಕಾಲ್ಮುರು ತಾಲ್ಲೂಕಿನಲ್ಲಿ 10 ಸೇರಿ ಒಟ್ಟು 33 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಈವರೆಗೆ 21 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 872 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 571 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಒಟ್ಟು 459 ಕಂಟೈನ್‌ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 9,293 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 29,073 ಜನರ ಮಾದರಿ ಸಂಗ್ರಹಿಸಲಾಗಿದ್ದು, 22,252 ಜನರ ವರದಿ ನೆಗೆಟಿವ್ ಬಂದಿದೆ. 5,055 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು