ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.44 ಕೋಟಿ ನಗದು ಜಪ್ತಿ

Published 23 ಮಾರ್ಚ್ 2024, 16:07 IST
Last Updated 23 ಮಾರ್ಚ್ 2024, 16:07 IST
ಅಕ್ಷರ ಗಾತ್ರ

ಹಿರಿಯೂರು : ತಾಲ್ಲೂಕಿನ ಜವನಗೊಂಡನಹಳ್ಳಿ ಗಡಿ ಸಮೀಪ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹1.44 ಕೋಟಿ ನಗದನ್ನು ಸಂಚಾರಿ ಜಾರಿ ದಳದ ಅಧಿಕಾರಿಗಳು ಶನಿವಾರ ವಶಪಡಿಸಿಕೊಂಡಿದ್ದಾರೆ.

ಹಣ ಸಾಗಿಸುತ್ತಿದ್ದ ವಾಹನ ಸಿಎಂಎಸ್ ಕಂಪನಿಗೆ ಸೇರಿದ್ದು ಎನ್ನಲಾಗಿದೆ. ಈ ಕಂಪನಿಯು ತುಮಕೂರಿನಿಂದ ಶಿರಾ ತಾಲ್ಲೂಕು ವ್ಯಾಪ್ತಿಯ ಎಟಿಎಂಗಳಿಗೆ ಹಣ ತುಂಬಲಷ್ಟೇ ಅನುಮತಿ ಪಡೆದಿತ್ತು. ಹಿರಿಯೂರು ತಾಲ್ಲೂಕಿನ ಗಡಿ ಪ್ರವೇಶಿಸಿದ ವಾಹನವನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದರು. 

‘ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಟಿಎಂಗಳಿಗೆ ಹಣ ತುಂಬುವವರು ಜಿಲ್ಲಾಧಿಕಾರಿಯ ಅನುಮತಿ ಪಡೆಯುವುದು ಕಡ್ಡಾಯ. ನಾವು ತಪಾಸಣೆ ನಡೆಸಿದಾಗ ವಾಹನದಲ್ಲಿದ್ದವರು ಸೂಕ್ತ ದಾಖಲೆ ಹಾಜರುಪಡಿಸಿಲ್ಲ. ಆದ್ದರಿಂದ ಹಣ ಹಾಗೂ ವಾಹನ ಜಪ್ತಿ ಮಾಡಿದ್ದೇವೆ’ ಎಂದು ತಹಶೀಲ್ದಾರ್ ರಾಜೇಶ್ ಕುಮಾರ್ ತಿಳಿಸಿದ್ದಾರೆ.

‘ಹಣವನ್ನು ಜಿಲ್ಲಾ ಪಂಚಾಯಿತಿ ಸಿಇಒ ನೇತೃತ್ವದಲ್ಲಿ ನಗದು ಜಪ್ತಿ ಸಮಿತಿಗೆ ಒ‍ಪ್ಪಿಸಲಾಗುವುದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT