ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಗೆರೆ: 14ರಿಂದ ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ

Last Updated 9 ಫೆಬ್ರುವರಿ 2022, 4:00 IST
ಅಕ್ಷರ ಗಾತ್ರ

ಸಿರಿಗೆರೆ: ಸಿರಿಗೆರೆಯಲ್ಲಿ ಫೆ.14ರಿಂದ 16ರವರೆಗೆ ಸಾಂಕೇತಿಕವಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ ಎಂದು ತರಳಬಾಳು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಫೆ.8ರಿಂದ 16ರವರೆಗೆ ನಡೆಯಬೇಕಿದ್ದ ‘ತರಳಬಾಳು ಹುಣ‍್ಣಿಮೆ’ ಮಹೋತ್ಸವವನ್ನು ಮುಂದೂಡಲಾಗಿತ್ತು. ಮೂರು ದಿವಸಗಳ ಕಾಲ ಮಠದ ಸಂಪ್ರದಾಯದಂತೆ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಕಾರ್ಯಕ್ರಮಗಳು ನಡೆಯಲಿವೆ. ಫೆ.16ರಂದು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಮಠದ ಪರಂಪರೆಯಲ್ಲಿ ನಡೆಸಿಕೊಂಡು ಬಂದಿರುವ ಸದ್ಧರ್ಮ ಸಿಂಹಾಸನಾರೋಹಣವನ್ನು ನೆರವೇರಿಸಲಿದ್ದಾರೆ.

ನಾಡಿನ ಪ್ರಸಿದ್ಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿಚಾರಗೋಷ್ಠಿ ಹಾಗೂ ಪ್ರತಿ ದಿವಸವೂ ಶಾಲಾ ವಿದ್ಯಾರ್ಥಿಗಳಿಂದ ಶಿವಮಂತ್ರ ಲೇಖನ ಇರುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT