ಹೊಸದುರ್ಗ: ತಾಲ್ಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ಸೋಮವಾರ ಮದುವೆ ಊಟ ಸೇವಿಸಿದ್ದ 150ಕ್ಕೂ ಹೆಚ್ಚು ಜನರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.

ಗ್ರಾಮದ ಪ್ರಭುಲಿಂಗಪ್ಪ ಅವರ ಪುತ್ರನ ಮದುವೆ ಗವಿರಂಗಾಪುರ ಬೆಟ್ಟದಲ್ಲಿ ಭಾನುವಾರ ನಡೆದಿತ್ತು. ಮದುವೆಗೆ ಹೋಗಿ ಬಂದಿದ್ದವರಿಗೆ ಸೋಮವಾರ ಬೆಳಿಗ್ಗೆಯಿಂದ ಹೊಟ್ಟೆನೋವು, ವಾಂತಿ ಬೇಧಿ, ಜ್ವರ ಕಾಣಿಸಿಕೊಂಡಿದೆ.

ಬೆಳಗಾಗುತ್ತಿದ್ದಂತೆ ಒಬ್ಬೊಬ್ಬರಾಗಿ ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ದಾಖಲಾದ್ದರಿಂದ ಆಸ್ಪತ್ರೆಯಲ್ಲಿ ಹಾಸಿಗೆಗಳು ಭರ್ತಿಯಾಗಿದ್ದವು. ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದಿದ್ದರಿಂದ ಮಲ್ಲಿಹಳ್ಳಿ, ಗೂಳೀಹಳ್ಳಿ, ಸುಡುಗಾಡು ಪಾಳ್ಯ ಗ್ರಾಮಗಳಲ್ಲಿ ಚಿಕಿತ್ಸಾ ಶಿಬಿರಗಳನ್ನು ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥರಾದವರನ್ನು ಹೊಸದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಯೋಗೀಶ್ ತಿಳಿಸಿದರು.

ಮದುವೆ ಮನೆಯ ಊಟ ಹಾಗೂ ನೀರಿನ ಸ್ಯಾಂಪಲ್ ಅನ್ನು ಪ್ರಯೋಗಾಯಕ್ಕೆ ಕಳುಹಿಸಲಾಗಿದೆ ಎಂದು ವೈದ್ಯಾಧಿಕಾರಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.