ಶುಕ್ರವಾರ, ಮೇ 27, 2022
23 °C

ಚಿತ್ರದುರ್ಗ: ಯುವಕರ ಕಿರುಕುಳ, ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಯುವಕರು ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸದುರ್ಗ ತಾಲ್ಲೂಕಿನಲ್ಲಿ ನಡೆದಿದೆ. ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸುವಂತೆ ಬಾಲಕಿ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

ಶೀರನಕಟ್ಟೆ ಗ್ರಾಮದ ರಾಧಿಕಾ(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದರು.

ಬಾಲಕಿ ಕಾಲೇಜಿಗೆ ಹೋಗುವಾಗ ಯುವಕರು ಕಿರುಕುಳ ನೀಡುತ್ತಿದ್ದರು. ಹಿಂಬಾಲಿಸಿ ಜಡೆ ಹಿಡಿದು ಎಳೆಯುವುದು, ಅಶ್ಲೀಲವಾಗಿ ಮಾತನಾಡುವುದು ಮಾಡುತ್ತಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಪೋಷಕರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು