ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ: ಹಿರಿಯೂರಿನಲ್ಲಿ 18 ಡೆಂಗಿ ಪ್ರಕರಣ

Published 9 ಜುಲೈ 2024, 15:58 IST
Last Updated 9 ಜುಲೈ 2024, 15:58 IST
ಅಕ್ಷರ ಗಾತ್ರ

ಹಿರಿಯೂರು: ‘ತಾಲ್ಲೂಕಿನಲ್ಲಿ ಹಿಂದಿನ ವರ್ಷ 49 ಡೆಂಗಿ ಪ್ರಕರಣಗಳು ವರದಿಯಾಗಿದ್ದವು. ಪ್ರಸಕ್ತ ವರ್ಷ ಇದುವರೆಗೆ 18 ಪ್ರಕರಣಗಳು ವರದಿಯಾಗಿವೆ. ಸೊಳ್ಳೆಗಳು ಉತ್ಪತ್ತಿ ಆಗದಂತೆ ನೋಡಿಕೊಂಡರೆ ಡೆಂಗಿಯಿಂದ ಪಾರಾಗಬಹುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಹೇಳಿದರು.

ನಗರದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ, ನಗರಸಭೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ನಗರಸಭೆ ಸಿಬ್ಬಂದಿ, ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಡೆಂಗಿ ನಿಯಂತ್ರಣ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಸೊಳ್ಳೆಗಳ ಉತ್ಪತ್ತಿ ತಾಣದ ನಾಶ ಪಡಿಸಲು ಕ್ರಿಯಾಯೋಜನೆ ತಯಾರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಹೈರಿಸ್ಕ್ ಪ್ರದೇಶಗಳಲ್ಲಿ ಲಾರ್ವಾ ಸಮೀಕ್ಷೆ ವೇಳೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

‘ಡೆಂಗಿ ಹರಡುವ ಸೊಳ್ಳೆಗಳು ಪೂರ್ವ ಮುಂಗಾರು, ಮುಂಗಾರು ಹಾಗೂ ಮುಂಗಾರಿನ ನಂತರದ ದಿನಗಳಲ್ಲಿ ಹೆಚ್ಚಾಗಿ ಉತ್ಪತ್ತಿಯಾಗುತ್ತವೆ. ಇದರಿಂದ ಡೆಂಗಿ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಈ ಬಗ್ಗೆ ಎಚ್ಚರ ಅಗತ್ಯ’ ಎಂದು ನಗರಸಭೆ ಪೌರಾಯುಕ್ತ ಎಚ್.ಮಹಾಂತೇಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT