ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: 192 ಕೊರೊನಾ ಸೋಂಕಿತರು ಗುಣಮುಖ

Last Updated 8 ಸೆಪ್ಟೆಂಬರ್ 2020, 14:50 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 192 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದೇ ದಿನ 23 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತರ ಪ್ರಮಾಣ ಎರಡು ದಿನಗಳಿಂದ ಕಡಿಮೆಯಾಗುತ್ತಿದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನ ಕಳೆದಂತೆ ಇಳಿಕೆಯಾಗುತ್ತಿದೆ.

ಮಂಗಳವಾರ 796 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಚಿತ್ರದುರ್ಗ ತಾಲ್ಲೂಕಿನಲ್ಲಿ 15, ಚಳ್ಳಕೆರೆ 5, ಹಿರಿಯೂರು, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ತಲಾ ಒಂದು ಕೋವಿಡ್‌ ಪ್ರಕರಣ ದೃಢಪಟ್ಟಿವೆ. ಇದರಿಂದ ಸೋಂಕಿತರ ಸಂಖ್ಯೆ 4,065ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 2,513ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,517 ಪ್ರಕರಣಗಳು ಸಕ್ರಿಯವಾಗಿವೆ. ಈವರೆಗೆ 42 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 1,216 ಜನರ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT