ಶುಕ್ರವಾರ, ಆಗಸ್ಟ್ 19, 2022
22 °C

ಕೊರೊನಾ ಸೋಂಕಿತರು 37, ಗುಣಮುಖ 73

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ 37 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೋವಿಡ್‌ ಆಸ್ಪತ್ರೆ ಹಾಗೂ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 73 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,042ಕ್ಕೆ ತಲುಪಿದೆ. ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಸೋಮವಾರ ಹೆಚ್ಚಾಗಿದೆ. ಈವರೆಗೆ 2,321 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,686 ಸಕ್ರಿಯ ಪ್ರಕರಣಗಳಿವೆ.

ಸೋಮವಾರ 456 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಈ ಪೈಕಿ ರ‍್ಯಾಪಿಡ್‌ ಆಂಟಿಜನ್‌ ಕಿಟ್‌ನಲ್ಲಿ 196 ಹಾಗೂ ಪಿಸಿಆರ್‌ ಪ್ರಯೋಗಾಲಯದಲ್ಲಿ 59 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಇದರಲ್ಲಿ 37 ಜನರಿಗೆ ಮಾತ್ರ ಸೋಂಕು ಇರುವುದು ಪತ್ತೆಯಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ 17, ಚಿತ್ರದುರ್ಗ ಹಾಗೂ ಚಳ್ಳಕೆರೆ ತಲಾ 7, ಹೊಳಲ್ಕೆರೆ 5 ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಒಬ್ಬರಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ. ಪ್ರಯೋಗಾಲಯದಲ್ಲಿ ಬಾಕಿ ಇರುವ 683 ಜನರ ವರದಿ ಬರುವುದು ಬಾಕಿ ಇದೆ. ಇದುವರೆಗೆ ಜಿಲ್ಲೆಯಲ್ಲಿ 42 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸೋಂಕು ತಡೆಗೆ ಜಿಲ್ಲೆಯಲ್ಲಿ 781 ಕಂಟೈನ್‌ಮೆಂಟ್ ರೂಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.