ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಳಲ್ಕೆರೆ: 41 ಕೆ.ಜಿ. ಶ್ರೀಗಂಧದ ತುಂಡುಗಳು ವಶ

Published 2 ಅಕ್ಟೋಬರ್ 2023, 16:11 IST
Last Updated 2 ಅಕ್ಟೋಬರ್ 2023, 16:11 IST
ಅಕ್ಷರ ಗಾತ್ರ

ಹೊಳಲ್ಕೆರೆ: ತಾಲ್ಲೂಕಿನ ನೀರ್ಥಡಿ ಅರಣ್ಯ ಪ್ರದೇಶದಲ್ಲಿ ಕಳವು ಮಾಡುತ್ತಿದ್ದ ₹1.64 ಲಕ್ಷ ಮೌಲ್ಯದ 41 ಕೆ.ಜಿ ಶ್ರೀಗಂಧದ ತುಂಡುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

ವಲಯ ಅರಣ್ಯಾಧಿಕಾರಿ ವಸವಂತ ಕುಮಾರ್ ನೇತೃತ್ಚದ ತಂಡ ನೀರ್ಥಡಿ ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ್ದು, ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ರವಿ ಎಂಬ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ. ಆತನ ಸಹಚರರಾದ ಚಿತ್ತೂರು ಜಿಲ್ಲೆಯ ಚಂದ್ರಪ್ಪ, ಮುರುಗೇಶ್, ಪ್ರಕಾಶ ತಲೆಮರೆಸಿಕೊಂಡಿದ್ದು, ಶೋಧ ನಡೆಸಲಾಗಿದೆ ಎಂದು ಆರ್ಎಫ್ಒ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT