ಭಾನುವಾರ, ಸೆಪ್ಟೆಂಬರ್ 19, 2021
31 °C
ಭದ್ರಾವತಿಯ ಸಂಬಂಧಿಕರ ಮನೆಯಿಂದ ಬೆಂಗಳೂರಿಗೆ ಮರಳುತ್ತಿದ್ದಾಗ ಘಟನೆ

ಮೇಟಿಕುರ್ಕೆ ಬಳಿ ಹೆದ್ದಾರಿಯಲ್ಲಿ ಅಪಘಾತ: ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ಮೇಟಿಕುರ್ಕೆ ಸಮೀಪದ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ತಾಯಮ್ಮ (50), ಲತಾ (26),  ವರ್ಣಿಕಾ (9), ಜಾಹ್ನವಿ (3) ಹಾಗೂ ಸುಶ್ಮಿತಾ (13) ಮೃತಪಟ್ಟವರು. ಗಾಯಗೊಂಡಿದ್ದ ಇತರ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭದ್ರಾವತಿಯ ಸಂಬಂಧಿಕರ ಮನೆಯಿಂದ ಬೆಂಗಳೂರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮೇಟಿಕುರ್ಕೆ ಸಮೀಪ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಲು ಪ್ರಯತ್ನಿಸಿದಾಗ ಇನ್ನೋವಾ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಆಗ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಬೆಂಗಳೂರಿನಿಂದ ಚಿತ್ರದುರ್ಗದತ್ತ ಬರುತ್ತಿದ್ದ ಸರಕು ಸಾಗಣೆ ಲಾರಿಗೆ ಅಪ್ಪಳಿಸಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ಅರುಣ್‌ ಮಾಹಿತಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.