ಸೋಮವಾರ, ಅಕ್ಟೋಬರ್ 26, 2020
23 °C

ಹೊಳಲ್ಕೆರೆ: ₹50 ಸಾವಿರ ಮೌಲ್ಯದ ಗಾಂಜಾ ಗಿಡ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳಲ್ಕೆರೆ: ತಾಲ್ಲೂಕಿನ ತಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಹನುಮಕ್ಕ ಎಂಬುವರ ಸರ್ವೆ ನಂಬರ್ 287/2ರ ಜಮೀನಿನಲ್ಲಿ ಮೆಕ್ಕೆಜೋಳದ ಮಧ್ಯೆ ಬೆಳೆದಿದ್ದ ₹50,000 ಮೌಲ್ಯದ ಹಸಿ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.

‘ಸಾರ್ವಜನಿಕರ ಮಾಹಿತಿ ಮೇರೆಗೆ ಜಮೀನಿಗೆ ಭೇಟಿ ನೀಡಿದಾಗ ತೆನೆ, ಹೂ, ಎಲೆ, ಕಾಯಿ ಮತ್ತು ಬೀಜಗಳಿಂದ ಕೂಡಿದ ಒಟ್ಟು 12 ಹಸಿ ಗಾಂಜಾ ಗಿಡಗಳು ಪತ್ತೆ ಆಗಿವೆ. ಗಿಡಗಳನ್ನು ವಶಪಡಿಸಿಕೊಂಡಿದ್ದು, ಜಮೀನಿನಲ್ಲಿದ್ದ ಆರೋಪಿ ಓಬಣ್ಣ ಎಂಬುವರನ್ನು ಬಂಧಿಸಲಾಗಿದೆ. ಅಬಕಾರಿ ಕಚೇರಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ’ ಎಂದು ಅಬಕಾರಿ ನಿರೀಕ್ಷಕಿ ಕೆ.ಲತಾ ತಿಳಿಸಿದ್ದಾರೆ.

ದಾಳಿ ಸಮಯದಲ್ಲಿ ಅಬಕಾರಿ ಉಪನಿರೀಕ್ಷಕ ಡಿ.ಬಿ.ಅವಿನಾಶ್, ಅಬಕಾರಿ ರಕ್ಷಕರಾದ ದಾದಾಪೀರ್, ಬಸವರಾಜ್, ಮಧುರಾಯ, ಪ್ರವೀಣ್ ಕುಮಾರ್, ಬಸವರಾಜ್, ತಾಳ್ಯ ಮತ್ತು ಘಟ್ಟಿಹೊಸಳ್ಳಿ ಗ್ರಾಮ ಲೆಕ್ಕಾಧಿಕಾರಿಗಳಾದ ಪ್ರದೀಪ್, ರಂಗನಾಥ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು