ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್ ಷಾ ಸ್ವಾಗತಕ್ಕೆ ಶೃಂಗಾರಗೊಂಡ ಪಟ್ಟಣ !

Last Updated 9 ಜನವರಿ 2018, 8:42 IST
ಅಕ್ಷರ ಗಾತ್ರ

ಹೊಳಲ್ಕೆರೆ: ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್ ಷಾ ಜ.10 ರಂದು ಪಟ್ಟಣಕ್ಕೆ ಆಗಮಿಸುತ್ತಿದ್ದು, ಕೊಟ್ರೆ ನಂಜಪ್ಪ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. 40 ಸಾವಿರ ಕುರ್ಚಿಗಳ ಸಾಮರ್ಥ್ಯದ ವಿಶಾಲ ಷಾಮಿಯಾನ ಹಾಕಿದ್ದು, ಕಾರ್ಯಕ್ರಮಕ್ಕೆ 80 ಸಾವಿರದಿಂದ ಒಂದು ಲಕ್ಷ ಜನ ಆಗಮಿಸುತ್ತಾರೆ ಎಂದು ಅಂದಾಜಿಸಲಾಗಿದೆ. ವೇದಿಕೆ ನಿರ್ಮಾಣಕ್ಕೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ.

ರಾರಾಜಿಸುತ್ತಿರುವ ಫ್ಲೆಕ್ಸ್‌ಗಳು

ಕಾರ್ಯಕ್ರಮಕ್ಕೆ ಇನ್ನೊಂದೇ ದಿನ ಬಾಕಿ ಇದ್ದು, ಇಡೀ ಪಟ್ಟಣ ರಂಗೇರುತ್ತಿದೆ. ಪಟ್ಟಣದ ಪ್ರಮುಖ ರಸ್ತೆಗಳ ಪಕ್ಕದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಗೆ ಸ್ವಾಗತ ಕೋರುವ ನೂರಾರು ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ರಸ್ತೆಯ ಇಕ್ಕೆಲಗಳಲ್ಲೂ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಶಿವಮೊಗ್ಗ ರಸ್ತೆಯ ಕುಕ್ವಾಡೇಶ್ವರಿ ದೇವಾಲಯದಿಂದ ಚಿತ್ರದುರ್ಗ ರಸ್ತೆಯ ಟೋಲ್‌ಗೇಟ್‌ವರೆಗೆ ರಸ್ತೆಯ ಎರಡೂ ಬದಿಯಲ್ಲಿ ಒಂದರ ಪಕ್ಕ ಒಂದರಂತೆ ಫ್ಲೆಕ್ಸ್ ಅಳವಡಿಸಲಾಗಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳು, ಮುಖಂಡರು, ಕಾರ್ಯಕರ್ತರು ತಮ್ಮ ನಾಯಕರೊಂದಿಗೆ ಫ್ಲೆಕ್ಸ್‌ಗಳಲ್ಲಿ ರಾರಾಜಿಸುತ್ತಿದ್ದಾರೆ

ಅಭೂತ ಪೂರ್ವ ಸಮಾರಂಭ

ಜ.10ರಂದು ಪಟ್ಟಣದಲ್ಲಿ ನಡಯಲಿರುವ ಪರಿವರ್ತನಾ ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭಾಗವಹಿಸುತ್ತಿದ್ದು, ಇದೊಂದು ಅಭೂತಪೂರ್ವ ಕಾರ್ಯಕ್ರಮ ಆಗಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿರುವ ಬಿಜೆಪಿ ಮುಖಂಡ ಎಂ.ಚಂದ್ರಪ್ಪ ತಿಳಿಸಿದರು.

ವೇದಿಕೆಯ ಹತ್ತಿರ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಷಾ ಅವರು ರಾಜ್ಯದಲ್ಲಿ ನಡೆಯುತ್ತಿರುವ ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ಬರುತ್ತಿರುವುದು ಇದೇ ಮೊದಲು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅನೇಕ ಬಾರಿ ಇಲ್ಲಿಗೆ ಬಂದಿದ್ದು, ಈ ಬಾರಿ ರಾಷ್ಟ್ರೀಯ ಅಧ್ಯಕ್ಷರನ್ನು ಕರೆತರುತ್ತಿರುವುದು ಇಡೀ ಜಿಲ್ಲೆಯ ಕಾರ್ಯಕರ್ತರಲ್ಲಿ ಸಂತಸ ಮೂಡಿದೆ. ಇದೊಂದು ಐತಿಹಾಸಿಕ ಸಮಾರಂಭ ಆಗಲಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಸುಮಾರು 100ಕ್ಕೂ ಹೆಚ್ಚು ನಾಯಕರು ಭಾಗವಹಿಸುತ್ತಿದ್ದಾರೆ. ಅಮಿತ್ ಷಾ ಅವರು ಬಿಜೆಪಿಯ ಮಿಷನ್ 150 ಗುರಿಗೆ ಇಲ್ಲಿಂದಲೇ ಮುನ್ನುಡಿ ಬರೆಯಲಿದ್ದಾರೆ. ಷಾ ಅವರನ್ನು ಕಾಣಲು ಇಲ್ಲಿನ ಜನ ಕಾತರದಿಂದ ಕಾಯುತ್ತಿದ್ದಾರೆ. ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ ಜನರನ್ನು ಆಹ್ವಾನಿಸಿ
ದ್ದೇನೆ. ಕಾರ್ಯಕರ್ತರು 100ಕ್ಕೂ ಹೆಚ್ಚು ವಾಹನಗಳಲ್ಲಿ ನನ್ನ ಜತೆ ಬಂದು ಕೈಜೋಡಿಸಿದ್ದಾರೆ. ಎಲ್ಲಾ ಕಡೆ ನನಗೆ ಪೂರ್ಣಕುಂಭದ ಸ್ವಾಗತ ನೀಡಿದ್ದು, ನನಗೆ ಮತ್ತಷ್ಟು ಹುರುಪು ತಂದಿದೆ ಎಂದರು.

ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಗೊಂದಲ ಏರ್ಪಟ್ಟಿಲ್ಲ. ರಾಷ್ಟ್ರೀಯ ಪಕ್ಷವೊಂದರ ಟಿಕೆಟ್ ಪಡೆಯಲು ಆಸೆಪಡುವುದು ಮಾಮೂಲು. ಹಾಗಾಗಿ ಅನೇಕರು ಟಿಕೆಟ್ ಆಕಾಂಕ್ಷಿಗಳಿರಬಹುದು. ಆದರೆ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್ ಕೊಡುತ್ತದೆ. ಎಲ್ಲಾ ಕಡೆ ಇರುವಂತೆ ಇಲ್ಲಿಯೂ ಸಣ್ಣ ಪುಟ್ಟ ಗೊಂದಲಗಳಿದ್ದು, ಟಿಕೆಟ್ ಹಂಚಿಕೆ
ನಂತರ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ. ಕೆಲವರು ಹತಾಶ ಮನೋಭಾವದಿಂದಾಗಿ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದು, ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ನಾಯಕರು ನನ್ನ ಮೇಲೆ ಭರವಸೆ ಇಟ್ಟು ಇಷ್ಟು ದೊಡ್ಡ ಕಾರ್ಯಕ್ರಮ ನಡೆಸುವ ಜವಾಬ್ದಾರಿ ನೀಡಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವುದಷ್ಟೇ ನನ್ನ ಗುರಿ ಎಂದು ಚಂದ್ರಪ್ಪ ಹೇಳಿದರು.

ಅಭೂತ ಪೂರ್ವ ಸಮಾರಂಭ
ಜ.10ರಂದು ಪಟ್ಟಣದಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭಾಗವಹಿಸುತ್ತಿದ್ದು, ಇದೊಂದು ಅಭೂತಪೂರ್ವ ಕಾರ್ಯಕ್ರಮ ಆಗಲಿದೆ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿರುವ ಬಿಜೆಪಿ ಮುಖಂಡ ಎಂ.ಚಂದ್ರಪ್ಪ ತಿಳಿಸಿದರು.

ವೇದಿಕೆಯ ಹತ್ತಿರ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಷಾ ಅವರು ರಾಜ್ಯದಲ್ಲಿ ನಡೆಯುತ್ತಿರುವ ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ಬರುತ್ತಿರುವುದು ಇದೇ ಮೊದಲು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅನೇಕ ಬಾರಿ ಇಲ್ಲಿಗೆ ಬಂದಿದ್ದು, ಈ ಬಾರಿ ರಾಷ್ಟ್ರೀಯ ಅಧ್ಯಕ್ಷರನ್ನು ಕರೆತರುತ್ತಿರುವುದು ಇಡೀ ಜಿಲ್ಲೆಯ ಕಾರ್ಯಕರ್ತರಲ್ಲಿ ಸಂತಸ ಮೂಡಿದೆ. ಇದೊಂದು ಐತಿಹಾಸಿಕ ಸಮಾರಂಭ ಆಗಲಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಸುಮಾರು 100ಕ್ಕೂ ಹೆಚ್ಚು ನಾಯಕರು ಭಾಗವಹಿಸುತ್ತಿದ್ದಾರೆ. ಅಮಿತ್ ಷಾ ಅವರು ಬಿಜೆಪಿಯ ಮಿಷನ್ 150 ಗುರಿಗೆ ಇಲ್ಲಿಂದಲೇ ಮುನ್ನುಡಿ ಬರೆಯಲಿದ್ದಾರೆ. ಷಾ ಅವರನ್ನು ಕಾಣಲು ಇಲ್ಲಿನ ಜನ ಕಾತರದಿಂದ ಕಾಯುತ್ತಿದ್ದಾರೆ. ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ ಜನರನ್ನು ಆಹ್ವಾನಿಸಿದ್ದೇನೆ. ಕಾರ್ಯಕರ್ತರು 100ಕ್ಕೂ ಹೆಚ್ಚು ವಾಹನಗಳಲ್ಲಿ ನನ್ನ ಜತೆ ಬಂದು ಕೈಜೋಡಿಸಿದ್ದಾರೆ. ಎಲ್ಲಾ ಕಡೆ ನನಗೆ ಪೂರ್ಣಕುಂಭದ ಸ್ವಾಗತ ನೀಡಿದ್ದು, ನನಗೆ ಮತ್ತಷ್ಟು ಹುರುಪು ತಂದಿದೆ ಎಂದರು.

ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಗೊಂದಲ ಏರ್ಪಟ್ಟಿಲ್ಲ. ರಾಷ್ಟ್ರೀಯ ಪಕ್ಷವೊಂದರ ಟಿಕೆಟ್ ಪಡೆಯಲು ಆಸೆಪಡುವುದು ಮಾಮೂಲು. ಹಾಗಾಗಿ ಅನೇಕರು ಟಿಕೆಟ್ ಆಕಾಂಕ್ಷಿಗಳಿರಬಹುದು. ಆದರೆ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್ ಕೊಡುತ್ತದೆ. ಎಲ್ಲಾ ಕಡೆ ಇರುವಂತೆ ಇಲ್ಲಿಯೂ ಸಣ್ಣಪುಟ್ಟ ಗೊಂದಲಗಳಿದ್ದು, ಟಿಕೆಟ್ ಹಂಚಿಕೆಯ ನಂತರ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ. ಕೆಲವರು ಹತಾಶ ಮನೋಭಾವದಿಂದ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದು, ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ನಾಯಕರು ನನ್ನ ಮೇಲೆ ಭರವಸೆ ಇಟ್ಟು ಇಷ್ಟು ದೊಡ್ಡ ಕಾರ್ಯಕ್ರಮ ನಡೆಸುವ ಜವಾಬ್ದಾರಿ ನೀಡಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವುದಷ್ಟೇ ನನ್ನ ಗುರಿ ಎಂದು ಚಂದ್ರಪ್ಪ ಹೇಳಿದರು.

ಕಾರ್ಯಕ್ರಮಕ್ಕೆ ಪೊಲೀಸರ ಹದ್ದಿನ ಕಣ್ಣು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಅಮಿತ್ ಷಾ ಭಾಗವಹಿಸುತ್ತಿರುವುದರಿಂದ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಸಿಪಿಐ ಮಧುಸೂಧನ್ ತಿಳಿಸಿದ್ದಾರೆ.

ಎಸ್‌ಪಿ, ಎಎಸ್‌ಪಿ ಸೇರಿದಂತೆ 6 ಡಿವೈಎಸ್‌ಪಿ, 12 ಸಿಪಿಐ, 35 ಪಿಎಸ್‌ಐ ಜತೆಗೆ 1 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. 3 ಕೆಎಸ್‌ಆರ್‌ಪಿ ಹಾಗೂ 6 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗುವುದು.

ಅಮಿತ್ ಷಾ ಅವರಿಗೆ ಎಸ್‌ಪಿಜಿ ಭದ್ರತಾ ಸಿಬ್ಬಂದಿಗಳಿರುತ್ತಾರೆ. ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಶಿವಮೊಗ್ಗ ರಸ್ತೆಯ ಅಂತ್ಯದಲ್ಲಿರುವ ಲೇಔಟ್, ಎಂಎಂ ಕಾಲೇಜು ಹಿಂಭಾಗದ ಕ್ರೀಡಾಂಗಣ, ಷಾದಿ ಮಹಲ್ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT