ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸೋಂಕು ಸಂಪರ್ಕದಲ್ಲಿ ಶೇ 60 ಜನ’

Last Updated 20 ಅಕ್ಟೋಬರ್ 2020, 2:42 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯ ಶೇ 60ರಷ್ಟು ಜನರು ಕೊರೊನಾ ಸೋಂಕು ಸಂಪರ್ಕಕ್ಕೆ ಒಳಪಟ್ಟಿರುವ ಸಾಧ್ಯತೆ ಇದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್‌.ಫಾಲಾಕ್ಷ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಆವರಣದಲ್ಲಿ ‘ಕೋವಿಡ್-19’ ಜನ ಜಾಗೃತಿ ಜಾಥಾಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರ ಗಂಟಲು ದ್ರವದ ಮಾದರಿ ಪಡೆದು ಪರೀಕ್ಷಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ಇತ್ತೀಚೆಗೆ ಅರಿವು ಮೂಡುತ್ತಿದ್ದು, ಸ್ವಯಂ ಪ್ರೇರಿತವಾಗಿ ಪರೀಕ್ಷೆಗೆ ಒಳಪಡುತ್ತಿದ್ದಾರೆ. ಆದರೂ, ಬಸ್‌ ನಿಲ್ದಾಣ, ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹತ್ತು ಸಾವಿರ ದಾಟಿದೆ. ಸಂಖ್ಯೆಯನ್ನು ಗಮನಿಸಿ ಆತಂಕಪಡುವ ಅಗತ್ಯವಿಲ್ಲ. ಸೋಂಕು ಲಕ್ಷಣ ಇರುವವರು ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜ್ವರ, ಕೆಮ್ಮು, ಶೀತ, ಉಸಿರಾಟದ ತೊಂದರೆ ಇರುವವರು ನಿರ್ಲಕ್ಷ್ಯ ಮಾಡಬಾರದು. ಜನಸಂದಣಿ ಸೇರುವ ಸ್ಥಳ ಹಾಗೂ ಸಭೆ–ಸಮಾರಂಭಗಳಲ್ಲಿ ಪಾಲ್ಗೊಳ್ಳಬಾರದು’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್, ಸಹಾಯಕ ಆಡಳಿತಾಧಿಕಾರಿ ಅಸ್ಲಾಂ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ, ಜಾನಕಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ
ಎಂ.ಬಿ.ಹನುಮಂತಪ್ಪ, ಆಂಜನೇಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT