ಮಂಗಳವಾರ, ನವೆಂಬರ್ 24, 2020
21 °C

79 ಜನರಿಗೆ ಕೋವಿಡ್: 45 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯಲ್ಲಿ 79 ಜನರಿಗೆ ಕೋವಿಡ್‌ ಇರುವುದು ಶನಿವಾರ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 12,698ಕ್ಕೆ ಏರಿಕೆಯಾಗಿದೆ.

ಶನಿವಾರ 2,262 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಮಾದರಿಗಳಲ್ಲಿ 79 ಜನರಿಗೆ ಸೋಂಕು ಇರುವುದು ಖಚಿತವಾಗಿದೆ. 60 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯ ಹಲವೆಡೆ ಚಿಕಿತ್ಸೆ ಪಡೆಯುತ್ತಿ ದ್ದವರಲ್ಲಿ 45 ಜನರು ಗುಣಮುಖರಾಗಿ ಶನಿವಾರ ಬಿಡುಗಡೆಯಾಗಿದ್ದಾರೆ. ಸೋಂಕಿತರ ಪೈಕಿ ಈವರೆಗೆ 12,179 ಜನರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಸದ್ಯ 458 ಸಕ್ರಿಯ ಪ್ರಕರಣಗಳಿವೆ. ಇನ್ನೂ 432 ಜನರ ವರದಿ ಬರುವುದು ಬಾಕಿ ಇದೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಂದು ಲಕ್ಷ ಜನರನ್ನು ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರೆಂದು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.