ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಬೆನ್ನಿಗೆ ನಿಂತ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ

Published 19 ಆಗಸ್ಟ್ 2024, 13:14 IST
Last Updated 19 ಆಗಸ್ಟ್ 2024, 13:14 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಕಳಂಕ ರಹಿತವಾಗಿ ಬದುಕಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ಬಹುಸಂಖ್ಯಾತರ ಅಪೇಕ್ಷೆಯಾಗಿದೆ ಎಂದು ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ ತಿಳಿಸಿದೆ.

ಈ ಕುರಿತು ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಉತ್ತಮ ಆಡಳಿತ ಯಂತ್ರಕ್ಕೆ ಅತ್ಯತ್ತಮ ನಾಯಕನ ಅವಶ್ಯಕತೆ ಇದೆ. ಆಡಳಿತ ಪಕ್ಷಗಳು ಪಾರದರ್ಶಕವಾಗಿ, ದೋಷಮುಕ್ತವಾಗಿ ಕೆಲಸ ಮಾಡಬೇಕು. ಜೊತೆಗೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ಲೋಪದೋಷಗಳನ್ನು ಎತ್ತಿ ಹಿಡಿಯುವುದು ಸಹಜ ಪ್ರಕ್ರಿಯೆ ಆಗಿದೆ. ಅಪರೂಪದ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಅವರು ತಮ್ಮ ಸಿಂಹಾವಲೋಕನ ಬದುಕಿನಲ್ಲಿ ಆದರ್ಶ, ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದಾರೆ. ನಡೆ ನುಡಿಯನ್ನು ಒಂದಾಗಿಸಿಕೊಂಡು ಆಡಳಿತ ನೀಡುತ್ತಿದ್ದಾರೆ ಎಂದು ಒಕ್ಳೂಟ ತಿಳಿಸಿದೆ.

‘ಪ್ರತ್ಯಕ್ಷ ನೋಡಿದರೂ ಪ್ರಾಮಾಣಿಸಿ ನೋಡಬೇಕು’ ಎಂಬ ಗಾದೆ ಮಾತನ್ನು ನೆನಪು ಮಾಡಿಕೊಳ್ಳಬೇಕಾಗಿದೆ. ಮುಡಾ ಪ್ರಕರಣದಲ್ಲಿ ಸತ್ಯ ಪ್ರತಿಪಾದಿಸಲು ಕಾನೂನಿನಲ್ಲಿ ಅನೇಕ ಅವಕಾಶಗಳಿವೆ. ವಕೀಲರೂ ಆಗಿರುವ ಸಿದ್ದರಾಮಯ್ಯ ಅವರು ಸಹಕಾರ ನೀಡುತ್ತಾರೆ. ರಾಜ್ಯದಲ್ಲಿ ಅಪರೂಪಕ್ಕೊಮ್ಮೆ ಅಹಿಂದ ವರ್ಗದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಜನರ ಬಯಕೆಯಾಗಿದೆ. ಒಕ್ಕೂಟ ಸದಾ ಸಿದ್ದರಾಮಯ್ಯ ಅವರ ಜೊತೆಗಿದೆ ಎಂದು ಒಕ್ಕೂಟದ ಪದಾಧಿಕಾರಿಗಳಾಗಿರುವ ಶ್ರೀಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT