ಆತಂಕದಲ್ಲಿ ಜೀವನ ಸಾಗಿಸುತ್ತಿರುವ ಅಂಗವಿಕಲ ಹೊರಗುತ್ತಿಗೆ ಪೌರ ಕಾರ್ಮಿಕ ಬಸವರಾಜ್ ಕುಟುಂಬ
ಚಿಕ್ಕ ಬೇಡಿಕೆಯ ಈಡೇರಿಕೆಗೂ ಪ್ರತಿಭಟನೆ ಅನಿವಾರ್ಯವಾಗಿದೆ. ಈ ಬಾರಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದೇವೆ. ನಾವೆಲ್ಲಾ ಒಂದೇ. ನಮ್ಮನ್ನು ಬೇರೆ ಮಾಡಲು ಆಗುವುದಿಲ್ಲ. ಕೊಟ್ಟ ಮಾತಿಗೆ ತಪ್ಪಿದರೆ ಮುಂದಿನ ಹೋರಾಟ ತೀವ್ರಗೊಳ್ಳಲಿದೆ.
ಎಸ್.ಪಿ.ಲವ ಅಧ್ಯಕ್ಷರು ಪೌರ ಕಾರ್ಮಿಕರ ಜಿಲ್ಲಾ ಸಂಘ
ಹೊರಗುತ್ತಿಗೆ ಪೌರ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ಮೂಲ ಸೌಲಭ್ಯ ಸಕಾಲಕ್ಕೆ ವೇತನ ದೂರದ ಮಾತಾಗಿದೆ. ಇವರ ಸೇವೆಯನ್ನು ಕೂಡಲೇ ಕಾಯಂಗೊಳಿಸಬೇಕಿದೆ.
ಎಂ.ಆರ್.ಶಿವರಾಜ್ ಅಧ್ಯಕ್ಷರು ಹೊರಗುತ್ತಿಗೆ ಪೌರ ಕಾರ್ಮಿಕರ ಜಿಲ್ಲಾ ಸಂಘ
ಈ ಸಲ ಸಮಸ್ಯೆ ಬಗೆಹರಿಸುವ ಬಗ್ಗೆ ಸರ್ಕಾರ ಲಿಖಿತ ಭರವಸೆ ನೀಡಿದೆಯಂತೆ. ಹಿಂದೆಂದಿಗಿಂತಲೂ ಹೆಚ್ಚು ಭರವಸೆ ಇದೆ ಇನ್ನೂ ಕಾಯಲು ಆಗದ ಸ್ಥಿತಿಯಲ್ಲಿ ನಾವೆಲ್ಲರೂ ಇದ್ದೇವೆ.