ನಾಯಕನಹಟ್ಟಿ: ಹೋಬಳಿಯ ಗೌಡಗೆರೆ ಗ್ರಾಮದಲ್ಲಿ ಈಚೆಗೆ ವಿದ್ಯುತ್ ತಂತಿ ಬಿದ್ದು, ಬೆಂಕಿ ತಗುಲಿ ತೆಂಗಿನ ತೋಟ ಸುಟ್ಟಿದೆ.
ಗೌಡಗೆರೆ ಗ್ರಾಮದ ಗಾಯಿತ್ರಿ ಅವರು ಜಮೀನಿನಲ್ಲಿ 60 ತೆಂಗು, 20 ಶ್ರೀಗಂಧ, 20 ಬೇವಿನ ಸಸಿಗಳನ್ನು ನೆಟ್ಟಿದ್ದರು.
ಜಮೀನಿನ ಪಕ್ಕದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗಳು ಗಾಳಿಗೆ ಒಂದಕ್ಕೊಂದು ತಗುಲಿ ಕಿಡಿಗಳು ಬಿದ್ದು ತೆಂಗಿನ ಗರಿಗಳಿಗೆ ಬೆಂಕಿ ಬಿದ್ದಿದೆ. ಬೆಂಕಿ ಇಡೀ ತೋಟಕ್ಕೆ ವ್ಯಾಪಿಸಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.