ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿ ನಿಲಯ ಪ್ರವೇಶ ಪ್ರಕ್ರಿಯೆ ವಿಳಂಬ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಆಕ್ರೋಶ
Published 3 ಜುಲೈ 2024, 15:58 IST
Last Updated 3 ಜುಲೈ 2024, 15:58 IST
ಅಕ್ಷರ ಗಾತ್ರ

ಚಿತ್ರದುರ್ಗ: ವಿದ್ಯಾರ್ಥಿ ವೇತನ ಹಾಗೂ ವಿದ್ಯಾರ್ಥಿ ನಿಲಯ ಪ್ರವೇಶ ಪ್ರಕ್ರಿಯೆ ವಿಳಂಬ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ ರಾಜ್ಯದಲ್ಲಿ ಕಾಲೇಜು ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾಗಿ ಮೂರು ತಿಂಗಳು ಕಳೆದರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ದೊರೆಯುತ್ತಿಲ್ಲ. ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿ ಪ್ರವೇಶಾತಿ ಕಲ್ಪಿಸಬೇಕೆಂದು ಆಗ್ರಹಿಸಿದರು.

ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ನಂಬಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಕಳೆದ ವರ್ಷ ವಿದ್ಯಾರ್ಥಿ ವೇತನ ನೀಡದ ಕಾರಣ ಬಹಳಷ್ಟು ತೊಂದರೆಯಾಗಿದೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಸಹ ಕಡಿತಗೊಳಿಸಲಾಗಿದೆ. ಈ ಮೂಲಕ ವಿದ್ಯಾರ್ಥಿ ವಿರೋಧಿ ನೀತಿಯನ್ನು ಸರ್ಕಾರ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರ ಕಾರ್ಯದರ್ಶಿ ಗೋಪಿ, ಸಾಮಾಜಿಕ ಜಾಲತಾಣದ ಚಿತ್ರಸ್ವಾಮಿ, ಸುದೀಪ್‌, ಹಾಸ್ಟೆಲ್‌ ಪ್ರಮುಖ್‌ ಸಿದ್ದೇಶ್‌, ಕಾರ್ಯಕರ್ತರಾದ ಮಧು, ಸಂಜು, ತಿಪ್ಪೇಶ, ದರ್ಶನ್‌, ಮನೋಜ್‌, ಜೀವನ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT