ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು | ಸರಕು ಸಾಗಣೆ ವಾಹನಕ್ಕೆ ಲಾರಿ ಡಿಕ್ಕಿ: ಇಬ್ಬರ ಸಾವು

Published 1 ಜೂನ್ 2024, 15:50 IST
Last Updated 1 ಜೂನ್ 2024, 15:50 IST
ಅಕ್ಷರ ಗಾತ್ರ

ಹಿರಿಯೂರು: ನಗರದ ಹೊರವಲಯದ ಚಳ್ಳಕೆರೆ ರಸ್ತೆಯ ಆರ್.ಕೆ. ಪವರ್ ಜೆನ್ ಸಮೀಪ ಶನಿವಾರ ಕುರಿಗಳನ್ನು ತುಂಬಿಕೊಂಡು ಬರುತ್ತಿದ್ದ ಮಿನಿ ಸರಕು ಸಾಗಣೆ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಕುರಿಗಾಹಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ರಮೇಶ್ (38) ಹಾಗೂ ಬೆಳಗೆರೆ ಗ್ರಾಮದ ಶಿವಲಿಂಗಪ್ಪ (60) ಮೃತಪಟ್ಟವರು.

ಹಿರಿಯೂರಿನಲ್ಲಿ ಶನಿವಾರ ನಡೆಯುವ ಕುರಿ ಮಾರುಕಟ್ಟೆಗೆ ಮಿನಿ ಸರಕು ಸಾಗಣೆ ವಾಹನದಲ್ಲಿ ಕುರಿಗಳನ್ನು ತರುತ್ತಿರುವಾಗ ಅವಘಡ ಸಂಭವಿಸಿದೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT