ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಗೆರೆ | ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ ವ್ಯಕ್ತಿ ಸಾವು

Published 31 ಮಾರ್ಚ್ 2024, 14:20 IST
Last Updated 31 ಮಾರ್ಚ್ 2024, 14:20 IST
ಅಕ್ಷರ ಗಾತ್ರ

ಸಿರಿಗೆರೆ: ಲಕ್ಷ್ಮೀಸಾಗರ–ಕಾತ್ರಾಳು ಬಳ್ಳೇಕಟ್ಟೆ ಸಮೀಪದ ಕುಂಬಾರ ಮಠದ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಲಿಸುತ್ತಿದ್ದ ಲಾರಿಗೆ ಕಾರೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕಾರಿನ ಚಾಲಕ ಚಲಿಸುತ್ತಿದ್ದ ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋಗಿ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನಲ್ಲಿದ್ದ ಇತರೆ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಚಿತ್ರದುರ್ಗ ಮತ್ತು ದಾವಣಗೆರೆ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ಸ್ಥಳೀಯರು ನೆರವಾಗಿದ್ದಾರೆ. ಭರಮಸಾಗರ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT