ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಮಾನವೀಯತೆ ಮೆರೆದ ಸಭಾಪತಿ

Published 1 ನವೆಂಬರ್ 2023, 16:28 IST
Last Updated 1 ನವೆಂಬರ್ 2023, 16:28 IST
ಅಕ್ಷರ ಗಾತ್ರ

ಚಿತ್ರದುರ್ಗ: ನಗರದ ಹೊರವಲಯದ ಗೋನೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಕಾರೊಂದು ನಜ್ಜುಗುಜ್ಜಾಗಿದೆ. ಇದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಗದಗ ಜಿಲ್ಲೆಯ ಶಹಪುರ್‌ ಪೇಟೆಯ ಬಸವೇಶ್ವರನಗರದ ವಿಶ್ವನಾಥ್‌ ಕಾಟವ ಕುಟಂಬ ಸಂಚರಿಸುತ್ತಿದ್ದ ಕಾರು ಅಪಫಾತಕ್ಕೆ ತುತ್ತಾಗಿದೆ. ಅದೃಷ್ಟವಷಾತ್‌ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ತುಮಕೂರಿನ ಶಾಲೆಯೊಂದರಲ್ಲಿ ವಿಶ್ವನಾಥ್‌ ಕಾಟವ ಅವರ ಪುತ್ರ ದಿವ್ಯತ್ವ ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯಲ್ಲಿ ಗುರುವಾರ ಪಾಲಕರ ಸಭೆ ಕರೆದಿದ್ದ ಕಾರಣ ಸಹೋದರಿಯರಾದ ಪ್ರಿಯಾಂಕಾ, ಗಾಯತ್ರಿ ಜತೆ ಎಲ್ಲರೂ ತುಮಕೂರಿಗೆ ತೆರಳುತ್ತಿದ್ದರು. ಈ ವೇಳೆ ಚಿತ್ರದುರ್ಗದ ಗೋನೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇವರ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಗಾಯಗೊಂಡ ಗಾಯತ್ರಿ, ದಿವ್ಯತ್ವ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ಹೊರಟ್ಟಿ ನೆರವಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದ ಕಾರಣ ತುರ್ತು ಚಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ತಿಳಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ ಅವರ ಮಾನವೀಯತೆ ಕಂಡು ಅಲ್ಲಿ ಸೇರಿದ ಜನ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT