ತಮಿಳುನಾಡಿನ ಐವರ ಸಾವು

7
ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಸಮೀಪ ಭೀಕರ ಅಪಘಾತ

ತಮಿಳುನಾಡಿನ ಐವರ ಸಾವು

Published:
Updated:
ಹಿರಿಯೂರು ತಾಲ್ಲೂಕಿನ ಕಸ್ತೂರಿರಂಗಪ್ಪನಹಳ್ಳಿ ಸಮೀಪ ಬುಧವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು.

ಹಿರಿಯೂರು: ಗೋವಾದಿಂದ ಪ್ರವಾಸ ಮುಗಿಸಿ ಕಾರಿನಲ್ಲಿ ಬರುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬುಧವಾರ ನಸುಕಿನ 1.30ರ ವೇಳೆಯಲ್ಲಿ ಐವರು ಮೃತಪಟ್ಟು, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪ ಅಪಘಾತವಾಗಿದ್ದು, ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಅಂಬೂರಿನ ಸದ್ದಾಂ ಹುಸೇನ್ (22), ತೌಸಿಫ್ ಅಹಮದ್ (24), ಶಾರುಖ್ (20) ಹಾಗೂ ಸದ್ದಾಂ (21) ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಅಸಿಫ್ ಅಹಮದ್ (22 ) ಚಿತ್ರದುರ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಗಂಭೀರವಾಗಿ ಗಾಯಗೊಂಡಿರುವ ಸೈಯದ್ ನಿರಾನ್, ಮಹಮದ್ ಅಲಿ, ರಿಹಾನ್, ಇರ್ಫಾನ್ ಹಾಗೂ ಅಬ್ದುಲ್ ರೆಹಮಾನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ರಂಜಾನ್ ಮುಗಿಸಿಕೊಂಡು ಹತ್ತು ಮಂದಿ ಗೆಳೆಯರ ಗುಂಪು ಗೋವಾ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಬುಧವಾರ ಊರಿಗೆ ಮರಳುವಾಗ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ’ ಎಂದು ಪ್ರಕರಣ ದಾಖಲು ಮಾಡಿಕೊಂಡಿರುವ ಗ್ರಾಮಾಂತರ ಠಾಣೆ ಪಿಎಸ್ಐ ಶ್ರೀನಿವಾಸ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !