ಶುಕ್ರವಾರ, ಜುಲೈ 30, 2021
21 °C

ಅಪಘಾತ: ತಾಯಿ, ಮಗ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಪುತ್ರನ ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ತಾಯಿ–ಮಗ ಮೃತಪಟ್ಟ ಧಾರುಣ ಘಟನೆ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಮುಂಭಾಗದ ಸರ್ವಿಸ್‌ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

ಚಿತ್ರದುರ್ಗ ತಾಲ್ಲೂಕಿನ ಸೊಲ್ಲಾಪುರ ಗ್ರಾಮದ ಶಿವಮ್ಮ(65), ಪುತ್ರ ಸಿದ್ದೇಶ್ (40) ಮೃತರು. ಸಿದ್ದೇಶ್‌ ಪತ್ನಿ ರೂಪಾ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿದ್ದೇಶ್‌ ಅವರು ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಬಸವೇಶ್ವರ ಆಸ್ಪತ್ರೆಯ ಮುಂಭಾಗದ ಸರ್ವಿಸ್‌ ರಸ್ತೆಯಲ್ಲಿ ವೇಗವಾಗಿ ಬಂದ ಟಿಪ್ಪರ್‌ ಡಿಕ್ಕಿ ಹೊಡೆದಿದೆ. ಸಿದ್ದೇಶ್‌ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸುವಾಗ ಶಿವಮ್ಮ ಕೊನೆಯುಸಿರೆಳೆದಿದ್ದಾರೆ. ಟಿಪ್ಪರ್‌ ಬ್ರೇಕ್‌ನಲ್ಲಿ ಸಮಸ್ಯೆ ಉಂಟಾಗಿ ಅಪಘಾತ ಸಂಭವಿಸಿದೆ ಎಂದು ಚಾಲಕ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು