ಭಾನುವಾರ, ಜನವರಿ 19, 2020
27 °C

ಕೇರಳದಲ್ಲಿ ಅಪಘಾತ: ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಕೇರಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯೂರು ನಗರಸಭೆ ಸದಸ್ಯ ಎ. ಪಾಂಡುರಂಗ ಮೃತಪಟ್ಟಿದ್ದಾರೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಇವರು ತೆರಳಿದ್ದರು. ಮಂಗಳವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಪಾಂಡುರಂಗ ಅವರು ಹಿರಿಯೂರು ನಗರಸಭೆಯ 7ನೇ ವಾರ್ಡ್‌ನಿಂದ ಜೆಡಿಎಸ್ ಪಕ್ಷದ  ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವಿರೋಧ ಆಯ್ಕೆಯಾಗಿದ್ದರು .

ಜೆಡಿಎಸ್ ಯುವ ಘಟಕದ ಕಾರ್ಯದರ್ಶಿ ಸಲಾವುದ್ದೀನ್, ವಸಂತನಗರ ಗ್ರಾಮದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು