ಬುಧವಾರ, ಮಾರ್ಚ್ 3, 2021
18 °C

ಅಂಚೆ ಇಲಾಖೆ ವಾಹನ ಕ್ಯಾಂಟರ್‌ಗೆ ಡಿಕ್ಕಿ: ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಪಘಾತ–‍ಪ್ರಾತಿನಿಧಿಕ ಚಿತ್ರ

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಮೇಟಿಕುರ್ಕಿ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕು ಸಾಗಣೆ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಕುಮಾರ್ (24), ವಿಜಯ್ (28) ಎಂದು ಗುರುತಿಸಲಾಗಿದೆ.

ಮೇಟಿಕುರ್ಕಿ ಬಳಿ ಹೆದ್ದಾರಿ ಬದಿಯಲ್ಲಿ ಶನಿವಾರ ತಡ ರಾತ್ರಿ ಕ್ಯಾಂಟರ್ ನಿಲುಗಡೆ ಮಾಡಿ ಚಾಲಕ ನಿದ್ದೆಗೆ ಜಾರಿದ್ದನು. ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಅಂಚೆ ಇಲಾಖೆ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಕ್ಯಾಂಟರ್‌ಗೆ ಅಪ್ಪಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು