ಮಂಗಳವಾರ, ಅಕ್ಟೋಬರ್ 15, 2019
29 °C

ಚಳ್ಳಕೆರೆ ಸಮೀಪ ಬಸ್–ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

Published:
Updated:

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಸಾಣೇಕೆರೆ ಸಮೀಪ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಾರಿಗೆ ಬಸ್ ಚಾಲಕ ಪ್ರವೀಣ್, ಪ್ರಯಾಣಿಕ ವಿಜಯಕುಮಾರ್ ಹಾಗೂ ಮತ್ತೊಬ್ಬ ಮಹಿಳೆ ಮೃತಪಟ್ಟರು. ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಸಾರಿಗೆ ಬಸ್ ಬೆಂಗಳೂರಿನಿಂದ ಬಳ್ಳಾರಿಗೆ ಸಾಗುತ್ತಿತ್ತು. ಚಳ್ಳಕೆರೆಯಿಂದ ಹಿರಿಯೂರು ಕಡೆಗ ಬರುತ್ತಿದ್ದ ಲಾರಿ ಶನಿವಾರ ನಸುಕಿನಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

Post Comments (+)