ಶುಕ್ರವಾರ, ಮೇ 14, 2021
35 °C

ವಾಯುವಿಹಾರದ ವೇಳೆ ಬೈಕ್ ಡಿಕ್ಕಿ: ಎಸಿಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಇಲ್ಲಿನ ತುರುವನೂರು ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಉಪವಿಭಾಗಾಧಿಕಾರಿ ವಿ.ಪ್ರಸನ್ನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ.

ನಸುಕಿನಲ್ಲಿ ವಾಯುವಿಹಾರಕ್ಕೆ ತೆರಳಿದಾಗ ಈ ಅಪಘಾತ ಸಂಭವಿಸಿದೆ. ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ಪ್ರಸನ್ನ ಅವರು ತುರುವನೂರು ರಸ್ತೆಯಲ್ಲಿ ವಾಯುವಿಹಾರ ನಡೆಸುತ್ತಿದ್ದರು. ನಸುಕಿನ 5.30ರ ಸುಮಾರಿಗೆ ಪತ್ನಿಯೊಂದಿಗೆ ತೆರಳಿದ್ದರು. ರೈಲ್ವೆ ಸೇತುವೆ ಸಮೀಪ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಇವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಇವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಬಡಾವಣೆ ಠಾಣೆಯ ಪೊಲೀಸರು ತಿಳಿಸಿದ್ದಾರೆ.

‘ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರರೂ ಆಯತಪ್ಪಿ ಬಿದ್ದಿದ್ದಾರೆ. ಗಾಬರಿಯಿಂದ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಇವರಲ್ಲಿ ಒಬ್ಬರು ಪಂಚೆ ಧರಿಸಿದ್ದಾಗಿ ಮಾಹಿತಿ ಸಿಕ್ಕಿದೆ. ಅಪಘಾತಕ್ಕೆ ಕಾರಣವಾದ ದ್ವಿಚಕ್ರ ವಾಹನ ಸಮೀಪದ ಗ್ರಾಮಕ್ಕೆ ಸೇರಿದ ಸಾಧ್ಯತೆ ಇದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು