ಸೋಮವಾರ, ಸೆಪ್ಟೆಂಬರ್ 20, 2021
24 °C

ಹೆದ್ದಾರಿಯಲ್ಲಿ ಅಪಘಾತ: ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದ ಸಭಾಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ತಾಲ್ಲೂಕಿನ ಸಿರಿಗೆರೆ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೆರವಾದರು.

ಸಭಾಪತಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ಶನಿವಾರ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ದಂಪತಿ ಹಾಗೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದನ್ನು ಗಮನಿಸಿದ ಹೊರಟ್ಟಿ ಅವರು ಪ್ರಾಥಮಿಕ ಚಿಕಿತ್ಸೆ ನೀಡಲು ಸಹಕರಿಸಿದರು. ಸುಮಾರು ಅರ್ಧ ಗಂಟೆ ಸ್ಥಳದಲ್ಲೇ ಉಳಿದು ಗಾಯಾಳುಗಳಿಗೆ ಧೈರ್ಯ ತುಂಬಿದರು.

ಆಂಬುಲೆನ್ಸ್‌ಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು. ಪೊಲೀಸರನ್ನು ಸ್ಥಳಕ್ಕೆ ಕರೆಸಿ ಮಾಹಿತಿ ನೀಡಿದರು. ಬಸವರಾಜ ಹೊರಟ್ಟಿ ಅವರು ಸಂವಿಧಾನಿಕ ದೊಡ್ಡ ಹುದ್ದೆಯಲ್ಲಿದ್ದರೂ ಗಾಯಾಳುಗಳಿಗೆ ತಕ್ಷಣವೇ ಸ್ಪಂದಿಸಿದ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು