ಶುಕ್ರವಾರ, ಜುಲೈ 1, 2022
27 °C

ಗೊಲ್ಲರಹಟ್ಟಿಗಳಿಗೆ ಮೂಲಸೌಲಭ್ಯ ಕಲ್ಪಿಸಲು ಕ್ರಮ: ಗೂಳಿಹಟ್ಟಿ ಶೇಖರ್ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸದುರ್ಗ: ತಾಲ್ಲೂಕಿನಲ್ಲಿನ ಗೊಲ್ಲರಹಟ್ಟಿಗಳಿಗೆ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಶಾಸಕ ಗೂಳಿಹಟ್ಟಿ ಡಿ. ಶೇಖರ್ ಭರವಸೆ ನೀಡಿದರು.

ತಾಲ್ಲೂಕು ಪಂಚಾಯಿತಿ‌ಯಿಂದ ಪಟ್ಟಣದ ಆಶೋಕ ರಂಗಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಹೊಸದುರ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಸಕ್ತ ಸಾಲಿನ ಅಲೆಮಾರಿ ಅರೆ ಅಲೆಮಾರಿ ಸಮುದಾಯಗಳ ಫಲಾನುಭವಿಗಳಿಗೆ ದೇವರಾಜ್ ಅರಸು ವಸತಿ ಯೋಜನೆಯಡಿ 1308 ಫಲಾನುಭವಿಗಳಿಗೆ ಕಾರ್ಯಾದೇಶ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿನ ಗೊಲ್ಲರಹಟ್ಟಿಗಳಲ್ಲಿನ ಜನರು ಮೂಲಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಹಲವು ಸೌಲಭ್ಯ ಕಲ್ಪಿಸುವುದರ ಕುರಿತು ಸದನದಲ್ಲಿ ಚರ್ಚಿಸಲಾಗಿದೆ. ಮನೆ ಮಂಜೂರಾತಿಗೆ ಸಂಬಂಧಪಟ್ಟಂತೆ ಗ್ರಾಮಸಭೆಗಳನ್ನು ಆಯೋಜಿಸಿ, ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಅದರಲ್ಲಿ 608 ಮನೆಗಳಿಗೆ ಮಂಜೂರಾತಿಗೆ ಆದೇಶ ನೀಡಲಾಗಿದೆ. 1308 ಮನೆ ಮಂಜೂರಾತಿ ಮಾಡಿದ ವಸತಿ ಸಚಿವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ತಾಲ್ಲೂಕಿನಲ್ಲಿ ನಿರಾಶ್ರಿತರ ಬಳಿ ಲಕ್ಷಗಟ್ಟಲೆ ಹಣ ಪಡೆದು, ಅವರನ್ನು ವಂಚಿಸಿ, ನಕಲಿ ಹಕ್ಕುಪತ್ರ ವಿತರಿಸುವವರ ಇದ್ದಾರೆ. ಅವರ ಬಗ್ಗೆ ಎಚ್ಚರವಿರಲಿ ಎಂದು ಸಲಹೆ ನೀಡಿದರು.

ತಾಲ್ಲೂಕು ‌ಪಂಚಾಯಿತಿ ಅನುದಾನದಲ್ಲಿ ವಿಕಲಚೇತನರಿಗೆ ವೀಲ್‌ಚೇರ್‌ ನೀಡಲಾಯಿತು. 55 ಜನ ಫಲಾನುಭವಿ
ಗಳಿಗೆ ಹೊಲಿಗೆಯಂತ್ರ ಮತ್ತು 5 ಜನರಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ವಿಶ್ವನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು