ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಮಲ್ಲನಗೌಡ ಎಚ್ಚರಿಕೆ

Published 1 ಜೂನ್ 2024, 15:47 IST
Last Updated 1 ಜೂನ್ 2024, 15:47 IST
ಅಕ್ಷರ ಗಾತ್ರ

ಹಿರಿಯೂರು: ಕೃಷಿ ಪರಿಕರ ಮಾರಾಟಗಾರರು ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದರೆ, ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಪರವಾನಗಿ ರದ್ದು ಮಾಡಲಾಗುವುದು ಎಂದು ಜಿಲ್ಲಾ ಜಾಗೃತ ಕೋಶದ ಸಹಾಯಕ ಕೃಷಿ ನಿರ್ದೇಶಕ ಮಲ್ಲನಗೌಡ ಎಚ್ಚರಿಸಿದರು.

ನಗರದ ಕೃಷಿ ಇಲಾಖೆಯಲ್ಲಿ ಶುಕ್ರವಾರ ಕೃಷಿ ಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಜಾಗೃತಿ ಸಭೆ ಹಾಗೂ ಸುರಕ್ಷಿತ ಕೀಟನಾಶಕಗಳ ಬಳಕೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಈ ವರ್ಷ ಮುಂಗಾರು ಮೇ ತಿಂಗಳಲ್ಲಿಯೇ ಆರಂಭವಾಗಿದ್ದು, ರೈತರು ಬಿತ್ತನೆಗೆ ಉತ್ಸುಕರಾಗಿದ್ದಾರೆ. ಕೃಷಿ ಪರಿಕರ ಮಾರಾಟಗಾರರು ರೈತ ಸ್ನೇಹಿಯಾಗಿ ವರ್ತಿಸಬೇಕು’ ಎಂದು ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಂ.ವಿ. ಮಂಜುನಾಥ್ ಸಲಹೆ ನೀಡಿದರು.

‘ದಾಖಲಾತಿಗಳ ನಿರ್ವಹಣೆ ಸರಿಯಾಗಿರಬೇಕು. ಹೆಚ್ಚುವರಿ ಗೋದಾಮಿನ ಅಗತ್ಯ ಇದ್ದಲ್ಲಿ ಅದಕ್ಕೂ ಪರವಾನಗಿ ಪಡೆಯಬೇಕು. ಅನಧಿಕೃತವಾಗಿ ದಾಸ್ತಾನು ಮಾಡಿದ್ದು ಕಂಡುಬಂದಲ್ಲಿ ರಸಗೊಬ್ಬರವನ್ನು ಜಪ್ತಿ ಮಾಡಲಾಗುವುದು’ ಎಂದು ಜಿಲ್ಲಾ ಜಾಗೃತ ಕೋಶದ ಸಹಾಯಕ ನಿರ್ದೇಶಕರಾದ ಉಲ್ಫತ್ ಜೈಬಾ ಎಚ್ಚರಿಸಿದರು.

ತಾಲ್ಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಎಂ.ವಿ. ಹರ್ಷ, ಕೃಷಿ ಅಧಿಕಾರಿಗಳಾದ ಉಮೇಶ್, ಕಿರಣ್ ಕುಮಾರ್, ಪಾರ್ವತಮ್ಮ, ಎಂ.ಜೆ. ಪವಿತ್ರಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT