ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಜಿಲ್ಲೆಯಲ್ಲಿ 360 ಕೋವಿಡ್‌ ಸಕ್ರಿಯ ಪ್ರಕರಣ

72 ಜನರಿಗೆ ಕೊರೊನಾ ಸೋಂಕು, ಒಬ್ಬರು ಸಾವು
Last Updated 18 ಅಕ್ಟೋಬರ್ 2020, 12:51 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಭಾನುವಾರ 72 ಜನರಿಗೆ ಕೊರೊನಾ ಸೋಂಕು ತಗಲಿರುವುದು ಖಚಿತವಾಗಿದೆ. ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 54 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 360ಕ್ಕೆ ಇಳಿಕೆಯಾಗಿದೆ.

ಭಾನುವಾರ 1,494 ಜನರ ಗಂಟಲು ಹಾಗೂ ಮೂಗಿನ ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಪರೀಕ್ಷೆಗೆ ಒಳಪಡಿಸಿದ ಮಾದರಿಗಳಲ್ಲಿ 72 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,529ಕ್ಕೆ ಏರಿಕೆಯಾಗಿದೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಒಬ್ಬರು ಭಾನುವಾರ ಮೃತಪಟ್ಟಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ ಮತ್ತೊಬ್ಬರು ಬೇರೆ ಕಾರಣಕ್ಕೆ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 10,117 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

‘ಸೋಂಕಿತರಿಗೆ ಸಂಬಂಧಿಸಿದಂತೆ 82,726 ಜನರನ್ನು ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರೆಂದು ಗುರುತಿಸಲಾಗಿದೆ. ಈವರೆಗೆ 88,888 ಜನರ ಗಂಟಲು ಹಾಗೂ ಮೂಗು ದ್ರವದ ಮಾದರಿ ಸಂಗ್ರಹಿಸಲಾಗಿದ್ದು, 77,052 ಜನರ ವರದಿ ನೆಗೆಟಿವ್ ಎಂದಿದೆ. ಇನ್ನೂ 819 ಜನರ ವರದಿ ಬರುವುದು ಬಾಕಿ ಇದೆ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT