ಸೋಮವಾರ, ಜೂನ್ 14, 2021
22 °C

ಚಿತ್ರದುರ್ಗ: ರೆಮ್‌ಡೆಸಿವಿರ್ ಕಳುಹಿಸಿದ ನಟ ಸೋನು ಸೂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟ ಸೋನು ಸೂದ್‌

ಚಿತ್ರದುರ್ಗ: ಇಲ್ಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಕೋವಿಡ್ ರೋಗಿಗೆ ಸಹಾಯಹಸ್ತ ಚಾಚಿರುವ ನಟ ಸೋನು ಸೂದ್, ರೆಮ್‌ಡೆಸಿವಿರ್ ಚುಚ್ಚುಮದ್ದು ಕಳುಹಿಸಿಕೊಟ್ಟಿದ್ದಾರೆ.

ಚಿತ್ರದುರ್ಗದ ವಿನಯ್ ಎಂಬುವರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ಚಿಕಿತ್ಸೆಗೆ ಇಲ್ಲಿಯ ಬಸಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಸಕಾಲಕ್ಕೆ ರೆಮ್‌ಡೆಸಿವಿರ್ ಚುಚ್ಚುಮದ್ದು ಸಿಗದೇ ಸಮಸ್ಯೆಗೆ ಸಿಲುಕಿದ್ದರು. ಈ ಸಂಗತಿಯನ್ನು ವಿನಯ್ ಅವರ ಪತ್ನಿ ಪೂಜಾ ಟ್ವೀಟ್ ಮಾಡಿದ್ದರು. ಇದನ್ನು ಕ್ರಿಕೆಟ್ ಆಟಗಾರ ಹರಭಜನ್ ಸಿಂಗ್ ಹಂಚಿಕೊಂಡಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸೋನು ಸೂದ್, ‘ಚುಚ್ಚುಮದ್ದು ತಲುಪಲಿದೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

‘ರೆಮ್‌ಡೆಸಿವಿರ್ ಇನ್ನೂ ಕೈಸೇರಿಲ್ಲ. ಶೀಘ್ರವೇ ತಲುಪುವ ನಿರೀಕ್ಷೆ ಇದೆ’ ಎಂದು ಪೂಜಾ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು