ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಲೋಕಸಭಾ ಕ್ಷೇತ್ರ: ಗೋವಿಂದ ಕಾರಜೋಳ ಪರ ನಟಿ ರಾಗಿಣಿ ಪ್ರಚಾರ

Published 21 ಏಪ್ರಿಲ್ 2024, 14:28 IST
Last Updated 21 ಏಪ್ರಿಲ್ 2024, 14:28 IST
ಅಕ್ಷರ ಗಾತ್ರ

ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಚಲನಚಿತ್ರ ನಟಿ ರಾಗಿಣಿ ಅವರು ಏಪ್ರಿಲ್‌ 22ರಂದು ನಗರದ ವಿವಿಧ ವಾರ್ಡ್‌ಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಎಂ. ರವೀಶ್‍ಕುಮಾರ್ ತಿಳಿಸಿದರು.

ನಗರದಲ್ಲಿ ಬಿಜೆಪಿ-ಜೆಡಿಎಸ್ ಸಮನ್ವ ಸಭೆಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎಂಬ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಟ್ಟಾಗಿ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದೇವೆ. ಗೋವಿಂದ ಕಾರಜೋಳ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕಾರ್ಯಕರ್ತರು ಸಂಕಲ್ಪ ಮಾಡಿದ್ದಾರೆ’ ಎಂದು ಹೇಳಿದರು.

‘ಚಳ್ಳಕೆರೆ ವಿಧಾನಸಭಾ ಕೇತ್ರದಲ್ಲಿ ಮೂರು ಬಾರಿ ಪ್ರಚಾರ ನಡೆಸಲಾಗಿದೆ. ಎಲ್ಲೆಡೆ ಮೋದಿ ಅಲೆ ಇದೆ. ಹಾಗಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ’ ಎಂದು ಬಿಜೆಪಿ ಮಂಡಲದ ತಾಲ್ಲೂಕು ಘಟಕದ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ವಿಶ್ವಾಸ ವ್ಯಕ್ತಪಡಿಸಿದರು.

‘ಸ್ಥಳೀಯ ಕಾಂಗ್ರೆಸ್ ಶಾಸಕರು ಇದುವರೆಗೆ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ’ ಎಂದು ಮುಖಂಡ ಕೆ.ಟಿ. ಕುಮಾರಸ್ವಾಮಿ ದೂರಿದರು.

ಮುಖಂಡರಾದ ಸೋಮಶೇಖರ್ ಮಂಡಿಮಠ, ಕಾಲುವೆಹಳ್ಳಿ ಜಯಪಾಲಯ್ಯ, ಪಿ.ತಿಪ್ಪೇಸ್ವಾಮಿ, ಹೆಗ್ಗೆರೆ ಆನಂದಪ್ಪ, ಸಿದ್ದಾಪುರ ಚೆನ್ನಿಗರಾಮಯ್ಯ, ಎ.ಅನಿಲ್‍ಕುಮಾರ್, ಎಂ.ಎನ್. ಜಯರಾಮ್, ಬಿ.ಎಸ್. ಶಿವಪುತ್ರಪ್ಪ, ಮಂಜುನಾಥ, ಸಿ.ಎಸ್.ಪ್ರಸಾದ್, ನಗರಸಭೆ ಸದಸ್ಯ ಪ್ರಮೋದ್, ಜಯಣ್ಣ, ಪಾಲಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT