ಪರಿಹಾರಕ್ಕಾಗಿ ಸಿ.ಎಂ.ಗೆ ಮನವಿ
‘ತೊಗರಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಲವು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಆದರೂ ನಮ್ಮ ಬೇಡಿಕೆ ಈಡೇರಿಲ್ಲ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಹೇಳಿದರು. ‘ಜ. 23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿ ಸಾಗರಕ್ಕೆ ಬಾಗಿನ ಅರ್ಪಿಸಲು ಹಿರಿಯೂರಿಗೆ ಬರುತ್ತಿದ್ದಾರೆ. ಆ ವೇಳೆ ನಾವು ಅವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿ ಸಲ್ಲಿಸುತ್ತೇವೆ’ ಎಂದರು.