ಚಿತ್ರದುರ್ಗ: ‘ಕಾಂಗ್ರೆಸ್ ಸರ್ಕಾರ ರಚನೆಯಾಗಿ 2 ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಮೇ 20ರಂದು ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ ಇದೆ. ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ್ ಜಯಕುಮಾರ್ ತಿಳಿಸಿದರು.

ಸಾಧನಾ ಸಮಾವೇಶದ ಅಂಗವಾಗಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಸಾಧನಾ ಸಮಾವೇಶ ಸರ್ಕಾರಿ ಕಾರ್ಯಕ್ರಮವಾಗಿದೆ. ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆ ತರುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲು ಸಚಿವರು, ಶಾಸಕರು ವ್ಯವಸ್ಥೆ ಮಾಡಲಿದ್ದಾರೆ. ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಸರ್ಕಾರದ ಎರಡು ವರ್ಷಗಳ ಸಾಧನೆ ಏನು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಾದ ಹೊಣೆ ಸಚಿವರು, ಶಾಸಕರ ಮೇಲಿದೆ’ ಎಂದರು.

‘ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ವರಿಷ್ಠರು ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರದ ಎಲ್ಲಾ ಸಚಿವರೂ ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ. ಸರ್ಕಾರ ಎರಡು ವರ್ಷ ಪೂರೈಸಿರುವ ಕಾರಣ ವಿವಿಧ ತಾಂಡಾಗಳಲ್ಲಿ ವಾಸಿಸುವ ಒಂದು ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸಜ್ಜಾಗಿದೆ. ಹಟ್ಟಿ, ಹಾಡಿ, ತಾಂಡಾ, ಪಾಳ್ಯ, ಮಜುರೆ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅಲ್ಲಿ ವಾಸಿಸುತ್ತಿರುವ ಅಷ್ಟೂ ಮಂದಿಗೆ ಗಣಕೀಕೃತ ಹಕ್ಕುಪತ್ರ ವಿತರಣೆ ಮಾಡಲಾಗುವುದು’ ಎಂದರು.

‘ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಗೆ ಪ್ರತಿ ಬಜೆಟ್ನಲ್ಲೂ ₹ 52,000 ಕೋಟಿ ಮೀಸಲಿಟ್ಟಿದೆ. ಇದರಿಂದ ಒಂದು ಕೋಟಿ ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಳ್ಳುವ ಮೂಲಕ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯಲಾಗುತ್ತಿದೆ’ ಎಂದರು.

ಶಾಸಕ ಕೆ.ಸಿ.ವಿರೇಂದ್ರ, ಮುಖಂಡರಾದ ಮುರಳಿಧರ ಹಾಲಪ್ಪ, ಎಂ.ಕೆ.ತಾಜ್ ಪೀರ್, ಹಾಲಸ್ವಾಮಿ, ನಾಗರಾಜ್, ಹನುಮಲಿ ಷಣ್ಮುಖಪ್ಪ, ರಾಘವೇಂದ್ರ, ಸಂಪತ್ ಕುಮಾರ್, ಮೈಲಾರಪ್ಪ, ಜಯಮ್ಮ, ಗೀತಾ ನಂದಿನಿಗೌಡ, ಶಿವಣ್ಣ, ಲಕ್ಷ್ಮಿಕಾಂತ, ಜಯ್ಯಣ್ಣ, ಮಧುಗೌಡ, ಎನ್,ಡಿ.ಕುಮಾರ್, ಕಾರೇಹಳ್ಳಿ ಉಲ್ಲಾಸ್, ಮಹಡಿ ಶಿವಮೂರ್ತಿ, ಖುದ್ದುಸ್, ಪ್ರಕಾಶ್, ರಾಮನಾಯ್ಕ್, ಮುದಸಿರ್ ನವಾಜ್, ಮಂಜುನಾಥ್, ಮುನೀರ ಮಕಂದರ್, ಮಹಬೂಬ್ ಖಾತೂನ್, ರಾಜಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.