ಹಿರಿಯೂರು: ‘ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏ. 27ರಂದು ಸಂಜೆ 4.30ಕ್ಕೆ ಸಂಗೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮದಕರಿ ಯುವಕ ಸಂಘದ ಅಧ್ಯಕ್ಷ ಸೋಮಶೇಖರ್ ತಿಳಿಸಿದ್ದಾರೆ.

ಉತ್ಸವದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ವೀಣಾವಾದನ, ಜಾನಪದ ಸಂಗೀತ, ತತ್ವಪದ, ವಚನ ಸಂಗೀತ, ಸುಗಮ ಸಂಗೀತ, ದಾಸರಪದ, ಕನ್ನಡ ಗೀತಗಾಯನ, ರಂಗಗೀತೆಗಳ ಗಾಯನ ನಡೆಯಲಿದ್ದು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಜೆ. ಕರಿಯಪ್ಪ ಮಾಳಿಗೆ ಉದ್ಘಾಟಿಸಲಿದ್ದಾರೆ. ತರಬೇತಿ ಶಾಲೆಯ ಪ್ರಾಂಶುಪಾಲ ಪಿ. ಪಾಪಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವದ್ದೀಕೆರೆ ಕಾಂತರಾಜು, ಮದಕರಿ ಬಳಗದ ಡಿ. ಗೋಪಾಲಸ್ವಾಮಿ ನಾಯಕ, ಸಂಗೀತ ಪ್ರಾಧ್ಯಾಪಕರಾದ ಆನಂದ್ ಆರ್. ಪಾಟೀಲ್ ಅಮುಕುಂದಿ, ಕೆ. ಗಂಗಾಧರ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-44-557037215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.